Friday 26th, April 2024
canara news

ಕರಾವಳಿಯಲ್ಲಿ ಕಡಲ್ಕೊರೆತ ಸಮಸ್ಯೆಗೆ ಕ್ರಿಯಾಯೋಜನೆ ಸಿದ್ಧ;ಬಾಬುರಾವ್ ಚಿಂಚನಸೂರು

Published On : 01 Jul 2015   |  Reported By : Canaranews Network


ಮಂಗಳೂರು:ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಕಡಲ ಕೊರೆತದಿಂದ ಉಂಟಾಗಿರುವ ಹಾನಿಯನ್ನು ತಾತ್ಕಲಿಕವಾಗಿ ತಡೆಗಟ್ಟಲು ೩೫ ಕೋಟಿ ರೂಪಾಯಿಗಳ ತುರ್ತು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಬಂದರು ಖಾತೆ ಸಚಿವ ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಕರಾವಳಿ ಜಿಲ್ಲೆಗಳ ಸಚಿವರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಕಡಲ್ಕೊರೆತ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಕಡಲಕೊರೆತದಿಂದ ಮೀನುಗಾರರ ಆಸ್ತಿಪಾಸ್ತಿ ಜೀವ ಹಾನಿಯಾಗದಂತೆ ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ. ಈಗಾಗಲೇ ಹಾನಿಗೊಳಗಾದ ಹಾಗೂ ಮುಂದುವರಿದ ಹಾನಿಗಳ ಕುರಿತು ವಾಸ್ತವಾಂಶವನ್ನು ಅರಿತುಕೊಳ್ಳಲು ಅಧಿಕಾರಿಗಳ ತಂಡ ರಚಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ.

ವರದಿ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಇದಕ್ಕೆ ಅಗತ್ಯವಾದ ಅನುದಾನ ಬಿಡುಗಡೆಗೆ ಕೋರಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು. ಇದುವರೆಗೆ ಕರಾವಳಿ ಜಿಲ್ಲೆಯಲ್ಲಿ ಅಂದಾಜು ೩೬ ಕೋ.ರೂ. ಹಾನಿ ಅಂದಾಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪ ಕೋಟಿ ರೂಪಾಯಿ, ಉಡುಪಿ ಜಿಲ್ಲೆಯಲ್ಲಿ ೧೩ ಕೋಟಿ ರೂಪಾಯಿ ಪ್ರಾಥಮಿಕ ಹಾನಿ ಅಂದಾಜಿಸಲಾಗಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ಕ್ರಿಯಾ ಯೋಜನೆ ರೂಪಿಸಲಾಗುವುದು.ತುರ್ತು ಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಈಗಾಗಲೇ ಆದೇಶ ನೀಡಲಾಗಿದೆ. ಅಧಿಕಾರಿಗಳು ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸಿ ಜನರ ಸಂಕಷ್ಟಗಳಿಗೆ ಸ್ಪಂದಿಸಲು ಸೂಚನೆ ನೀಡಲಾಗಿದೆ ಎಂದರು.ಸಭೆಯಲ್ಲಿ ಅರಣ್ಯ ಖಾತೆ ಸಚಿವ ಬಿ.ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಶಾರಾದ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಬಂದರು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here