Friday 29th, March 2024
canara news

ಮಂಗಳೂರು ವಿ.ವಿ ಕ್ಯಾಂಪಸ್ಸಿನಲ್ಲಿ ನೈತಿಕ ಪೊಲೀಸ್ಗಿರಿ : ಮೊಗವೀರಪಟ್ಣದ ಐವರ ಬಂಧನ

Published On : 07 Oct 2015   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲ ಕಡೆಗೆ ವಿಹಾರಕ್ಕೆ ತೆರಳಿದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೆನ್ನಟ್ಟಿದ ಮೊಗವೀರಪಟ್ಣದ ಐವರ ತಂಡ ಕೊಣಾಜೆಯ ವಿ.ವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿಯೋರ್ವನಿಗೆ ಥಳಿಸುವ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದಿದ್ದು, ಈ ಸಂದರ್ಭ ಕೊಣಾಜೆ ಪೊಲೀಸರು ಐವರನ್ನು ಬಂಧಿಸಿದ ಘಟನೆ ಸೋಮವಾರ ಸಂಜೆ ವೇಳೆ ಸಂಭವಿಸಿದೆ.

ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿಭಾಗವೊಂದರ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಬಳ್ಳಾರಿ ಮೂಲದ ರಮೇಶ, ಪುತ್ತೂರು ನಿವಾಸಿ ಶಫೀವುಲ್ಲಾ ಸೇರಿದಂತೆ ಇಬ್ಬರು ಹಿಂದು ಹಾಗೂ ಒಬ್ಬಳು ಮುಸ್ಲಿಂ ವಿದ್ಯಾರ್ಥಿನಿಯರು ಜತೆಯಾಗಿ ಉಳ್ಳಾಲ ಕಡೆಗೆ ವಿಹಾರಕ್ಕೆಂದು ತೆರಳಿದ್ದರು.ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಮತ್ತು ಮೊಗವೀರಪಟ್ಣ ಬೀಚಿಗೆ ವಿದ್ಯಾರ್ಥಿಗಳು ವಿಹಾರಕ್ಕೆ ತೆರಳಿದ್ದರು. ಅಲ್ಲಿ ಎಲ್ಲರೂ ಜತೆಯಾಗಿ ನೀರಿನಾಟ ಆಡುತ್ತಾ ಸೆಲ್ಫೀ ಕ್ಲಿಕ್ಕಿಸುವಲ್ಲಿ ನಿರತರಾಗಿದ್ದರು. ಇದು ಸ್ಥಳೀಯ ಯುವಕರ ಗಮನಕ್ಕೆ ಬಂದಿದ್ದು, ಅಲ್ಲದೆ ತಂಡದಲ್ಲಿ ಮುಸ್ಲಿಂ ಯುವಕರು ಇರುವ ಬಗ್ಗೆ ಗೊತ್ತಾಗಿ ವಿದ್ಯಾರ್ಥಿಗಳನ್ನು ತಂಡವು ಹಿಂಬಾಲಿಸಿದೆ . ಇದರಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿಗಳು ಬಸ್ಸನ್ನೇರಿ ವಿಶ್ವವಿದ್ಯಾನಿಲಯದತ್ತ ಪ್ರಯಾಣ ಬೆಳೆಸಿದ್ದರು. ಆದರೆ ಪಟ್ಟುಬಿಡದ ಮೊಗವೀರಪಟ್ಣದ ನಿವಾಸಿಗಳ ತಂಡ ರಿಕ್ಷಾ ಏರಿ ಬಸ್ಸನ್ನು ಹಿಂಬಾಲಿಸಲು ಆರಂಭಿಸಿ ತೊಕ್ಕೊಟ್ಟು ಸಮೀಪ ಅಡ್ಡಗಟ್ಟಿದ್ದರು.ಈ ಸಂದರ್ಭ ವಿದ್ಯಾರ್ಥಿಗಳಲ್ಲಿ ಶಫೀವುಲ್ಲಾ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಬಳಿಕ ವಿದ್ಯಾರ್ಥಿ ರಮೇಶ್ನನ್ನು ರಿಕ್ಷಾದಲ್ಲಿ ಹಾಕಿದ ತಂಡ ಶಫೀವುಲ್ಲಾ ಇರುವ ರೂಮು ಮತ್ತು ಕ್ಲಾಸನ್ನು ತೋರಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಕರೆತಂದಿದ್ದಾರೆ.ಅಲ್ಲಿ ಕ್ಯಾಂಪಸ್ಸಿನಲ್ಲಿ ರಮೇಶನಿಗೆ ಥಳಿಸುತ್ತಿರುವುದನ್ನು ಗಮನಿಸಿದ ಇತರೆ ವಿದ್ಯಾರ್ಥಿಗಳು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೊಗವೀರಪಟ್ಣದ ನಿವಾಸಿಗಳಾದ ಸುಹಾನ್, ಸುನಿಲ್, ಪ್ರಜ್ವಲ್, ಅಭಿಲಾಷ್, ಚಂದ್ರ ಎಂಬವರನ್ನು ಬಂಧಿಸಿದ್ದಾರೆ. ಎಲ್ಲರ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here