Saturday 27th, April 2024
canara news

ಎತ್ತಿನಹೊಳೆ ಯೋಜನೆ ವಿರೋಧಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Published On : 07 Oct 2015   |  Reported By : Canaranews Network

ಮಂಗಳೂರು: ಎತ್ತಿನಹೊಳೆ ಯೋಜನೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ಬೆಳ್ತಂಗಡಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ೪೦ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದವು. ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು.

ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಕೆಲವೆಡೆ ಪ್ರಯಾಣಿಕರು ವಾಹನಗಳಿಲ್ಲದೆ ಪರದಾಡುತ್ತಿದ್ದ ದೃಶ್ಯ ಕಂಡು ಬಂತು.ಇನ್ನು, ಯೋಜನೆ ವಿರೋಧಿಸಿ ಪ್ರತಿಭಟನಾಕಾರರು ರಸ್ತೆಯೇ ಮಧ್ಯ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಅಲ್ಲದೇ, ಬಂದ್ ಹಿನ್ನೆಲೆ ರಸ್ತೆಯಲ್ಲಿ ಕ್ರಿಕೆಟ್ ಹಾಗೂ ಕೋಳಿ ಅಂಕ ಆಡುವ ಮೂಲಕ ಜನತೆ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದರು.ಬಂದ್ ಶಾಂತಿಯುತವಾಗಿ ನಡೆಯಿತು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here