Friday 26th, April 2024
canara news

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ: ಎ.ಬಿ.ಇಬ್ರಾಹಿಂ

Published On : 30 Nov 2015   |  Reported By : Canaranews Network


ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗವು ನಿರ್ದೇಶಿಸಿದ್ದು, ಡಿ.27 ಚುನಾವಣೆ ನಡೆಯಲಿದೆ ಎಂದು ದ. ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ದ.ಕ.ಜಿಲ್ಲೆ ಹಾಗೂ ಉಡುಪಿ ವ್ಯಾಪ್ತಿಯ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗೆ ಚುನಾಯಿತ ಮತ್ತು ನಾಮನಿರ್ದೇಶಿತ ಸದಸ್ಯರು, ಲೋಕ ಸಭಾ, ರಾಜ್ಯ ಸಭಾ ಸದಸ್ಯರು, ವಿಧಾನ ಸಭಾ ಸದಸ್ಯರು ಸೇರಿ ಒಟ್ಟು 6,559 ಮತದಾರರಿದ್ದಾರೆ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಡಿ.2 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಡಿಸೆಂಬರ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 10ರಂದು ನಾಮ ಪತ್ರ ಪರಿಶೀಲನೆ ನಡೆಯಲಿದೆ. ಡಿ.12 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ ಎಂದು ಅವರು ತಿಳಿಸಿದರು.ಮತದಾನವನ್ನು ಸಂಪೂರ್ಣ ವಿಡಿಯೋಗ್ರಫಿ ಮಾಡಲಾಗುವುದು. ದ.ಕ.ಜಿಲ್ಲಾಧಿಕಾರಿ ಚುನಾವಣಾಧಿಕಾರಿಯಾಗಿದ್ದು, ಅಪರ ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಮತದಾರರಲ್ಲಿ 4 ಜನ ಅನಕ್ಷರಸ್ಥರಿದ್ದು ಇವರಿಗೆ ಮತದಾನ ಮಾಡಲು ಸಹಾಯ ಬೇಕಾಗಿದ್ದಲ್ಲಿ ಜಿಲ್ಲಾಧಿಕಾರಿಗೆ ಲಿಖಿತ ವರದಿ ನೀಡಿದ್ದಲ್ಲಿ ಸಹಾಯಕರನ್ನು ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here