Thursday 25th, April 2024
canara news

ವೃದ್ಧ ದಂಪತಿಯ ಹತ್ಯೆ

Published On : 11 Jan 2016   |  Reported By : Canaranews Network


ಮಂಗಳೂರು: ವೃದ್ಧ ದಂಪತಿಗಳಿಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಕ್ಕಿಂಜೆ ಶಾಲಾ ಹಿಂಬದಿ ಬಳಿ ನಡೆದಿದೆ.ಹತ್ಯೆಗೀಡಾದವರನ್ನು ವರ್ಕಿ ಯಾನೆ ವರ್ಗೀಸ್(೯೦), ವೇಲುಕುಟ್ಟಿ(೮೪) ಎಂದು ಗುರುತಿಸಲಾಗಿದೆ. ಆದಿತ್ಯವಾರ ತಡರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ ಮನೆ ಕೆಲಸದವರು ಆಗಮಿಸಿದಾಗ ಈ ಕೃತ್ಯ ಬಯಲಾಗಿದೆ. ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು.

ಮನೆಯೊಳಗೆ ಮಹಿಳೆಯ ಮೃತದೇಹ ಪತ್ತೆಯಾದರೆ, ಮನೆಯ ಹೊರಗಡೆ ವರ್ಗೀಸ್ ಮೃತದೇಹ ಪತ್ತೆಯಾಗಿತ್ತು. ಈ ವೃದ್ಧ ದಂಪತಿಗಳು ಮನೆಯಲ್ಲಿ ಇಬ್ಬರೇ ವಾಸವಾಗಿದ್ದು, ಇವರ ಮಕ್ಕಳು ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here