Tuesday 16th, April 2024
canara news

ಎರಡು ಅವಧಿಗೆ ಕ್ಷೇತ್ರ ಮೀಸಲಾತಿ: ಆಸ್ಕರ್‌ ಫೆರ್ನಾಂಡಿಸ್

Published On : 18 Jan 2016   |  Reported By : Canaranews Network


ಮಂಗಳೂರು: ಎರಡು ಅವಧಿಗೆ ಕ್ಷೇತ್ರ ಮೀಸಲಾತಿ, ತ್ರಿಸ್ತರ ಪಂಚಾಯತ್‌ ರಾಜ್‌ ವ್ಯವಸ್ಥೆಗೆ ಹೆಚ್ಚು ಅನುದಾನ ಹಾಗೂ ಅಧಿಕಾರ ಸೇರಿದಂತೆ ಕರ್ನಾಟಕ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಗ್ರಾಮ್‌ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ವಿಧೇಯಕ 2015 ದೇಶದ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಒಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಹೇಳಿದರು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಂಚಾಯತ್‌ ರಾಜ್‌ ವ್ಯವಸ್ಥೆಗೆ ಶಕ್ತಿ ನೀಡಿ ಜನರಿಗೆ ಇನ್ನೂ ಹೆಚ್ಚು ಅಧಿಕಾರ ನೀಡುವ ಉದ್ದೇಶದಿಂದ ರಮೇಶ್‌ ಕುಮಾರ್‌ ನೇತೃತ್ವದ ಸಮಿತಿ ನೀಡಿದ ವರದಿಯನ್ನು ಕರ್ನಾಟಕ ಸರಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಇದರಲ್ಲಿ ಹಲವು ಮಹತ್ವದ ಅಂಶ ಒಳಗೊಂಡಿದೆ ಎಂದರು.ಈವರೆಗೆ ಕ್ಷೇತ್ರ ಮೀಸಲಾತಿ ಒಂದು ಅವಧಿಗೆ ಮಾತ್ರ ಇತ್ತು. ಆದರೆ ಹೊಸ ತಿದ್ದುಪಡಿಯಲ್ಲಿ ಮೀಸಲಾತಿ ಅವಧಿಯನ್ನು 2 ಅವಧಿಗೆ ನಿಗದಿಪಡಿಸಲಾಗಿದೆ. ಇದರಿಂದ ಆ ಕ್ಷೇತ್ರವನ್ನು ಪ್ರತಿನಿಧಿಸುವ ಜನಪ್ರತಿನಿಧಿಗೆ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಉತ್ತೇಜನ ಲಭಿಸುತ್ತದೆ ಎಂದರು.

ತಿದ್ದುಪಡಿ ಮೂಲಕ ಗ್ರಾಮೀಣ ಜನರನ್ನು ಅಧಿಕಾರಯುಕ್ತರನ್ನಾಗಿ ಮಾಡಲು ಮತ್ತು ಗ್ರಾಮಸಭೆಗಳನ್ನು ಬಲಗೊಳಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಸಭೆ ನಡೆಸಲು ವಿಫಲವಾಗುವ ಅಧ್ಯಕ್ಷರನ್ನು ಬರ್ಖಾಸ್ತುಗೊಳಿಸುವ ಅವಕಾಶ ಈ ಮಸೂದೆ ಒಳಗೊಂಡಿದೆ. ಆಯಾಯ ಜನವಸತಿ, ವಾರ್ಡ್‌ ಮತ್ತು ಗ್ರಾಮಸಭೆಗಳು ತಮ್ಮ ವ್ಯಾಪ್ತಿಯಲ್ಲಿ ಸರಕಾರದ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಫಲಾನುಭವಿಗಳನ್ನು ಗುರುತಿಸುವ ಮತ್ತು ಆದ್ಯತೆ ಆಧಾರದ ಮೇಲೆ ಆಯ್ಕೆ ಮಾಡುವ ಮಹತ್ವದ ಜವಾಬ್ದಾರಿ ಹೊಂದಿದೆ ಎಂದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here