Friday 26th, April 2024
canara news

ಇಂದು ಬೀಜಾಡಿ ಮಿತ್ರ ಸಂಗಮದ 19ನೇ ವಾರ್ಷಿಕೋತ್ಸವ ರಥಶಿಲ್ಪಿ ಲಕ್ಷ್ಮಿ ನಾರಾಯಣ ಆಚಾರ್ಯರಿಗೆ ನಮ್ಮೂರ ಪ್ರಶಸ್ತಿ

Published On : 23 Jan 2016   |  Reported By : Bernard J Costa


ಕುಂದಾಪುರ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಬೀಜಾಡಿ ಮಿತ್ರ ಸಂಗಮದ 19ನೇ ವಾರ್ಷಿಕೋತ್ಸವ, ನಮ್ಮೂರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ಥಳಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.23ರ ಶನಿವಾರ ಬೀಜಾಡಿ ಮೂಡು ಶಾಲಾ ವಠಾರದಲ್ಲಿ ರಾತ್ರಿ 7.30ಕ್ಕೆ ಜರುಗಲಿದೆ. ಬೆಳಿಗ್ಗೆ 9 ಗಂಟೆಯಿಂದ ಬೀಜಾಡಿ ಮಿತ್ರಸೌಧದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ. ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಂಗ ನಿರ್ದೇಶಕ , ಕಿರು-ಹಿರಿ ತೆರೆ ನಟರಾದ ರಘು ಪಾಂಡೇಶ್ವರ ಆಗಮಿಸಲಿದ್ದು,ಕೋಟೇಶ್ವರ ಎನ್.ಆರ್ ಆಚಾರ್ಯ ಆಸ್ಪತ್ರೆಯ ಮೂಳೆತಜ್ಞ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಶಂಸನೆಗೈಯಲಿದ್ದಾರೆ.

ಇದೇ ಸಂದರ್ಭದಲ್ಲಿ ಮಿತ್ರ ಸಂಗಮ ಕೊಡಮಾಡುವ ನಮ್ಮೂರ ಪ್ರಶಸ್ತಿಯನ್ನು ರಾಜ್ಯ, ರಾಷ್ಟ್ರ, ಶಿಲ್ಪ ಕಲಾ ಅಕಾಡೆಮಿ ಮತ್ತು ರಾಷ್ಟ್ರೀಯ ಶಿಲ್ಪಗುರು ಪ್ರಶಸ್ತಿ ವಿಜೇತ ರಥಶಿಲ್ಪಿ ಲಕ್ಷ್ಮಿನಾರಾಯಣ ಆಚಾರ್ಯ ಅವರಿಗೆ ಅವರಿಗೆ ಪ್ರದಾನ ಮಾಡಲಾಗುವುದು. ಜತೆಗೆ ರಾಷ್ಟ್ರಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ತಂಡದ ಪ್ರತಿನಿಧಿ ರೋಹಿತ್ ಕುಮಾರ್ ಗೋಪಾಡಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು, ಸಂಸ್ಥೆಯ ಸದಸ್ಯರಿಂದ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಮಿತ್ರ ಸಂಗಮದ ಅಧ್ಯಕ್ಷ ಅನೂಪ್‍ಕುಮಾರ್ ಬಿ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here