Friday 19th, April 2024
canara news

0-5 ವರ್ಷದ ಮಕ್ಕಳ ಸಮಗ್ರ ಸಮೀಕ್ಷೆ: ಡಿಸಿ ಸೂಚನೆ

Published On : 14 Feb 2016   |  Reported By : Canaranews Network


ಮಂಗಳೂರು: ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ದ.ಕ. ಜಿಲ್ಲೆಯಲ್ಲಿರುವ 5 ವರ್ಷದೊಳಗಿನ ಎಲ್ಲ ಮಕ್ಕಳ ಸಮೀಕ್ಷೆ ನಡೆಸುವಂತೆ ದ.ಕ.ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಫೆ. 21ರಂದು ನಡೆಯುವ ಎರಡನೇ ಹಂತದ ಕಾರ್ಯಕ್ರಮದ ಕುರಿತು ದ.ಕ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳಿಗೆ ಪೋಲಿಯೋ ಹನಿಯನ್ನು ವ್ಯವಸ್ಥಿತವಾಗಿ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಮಕ್ಕಳ ನಿಖರ ಅಂಕಿ-ಸಂಖ್ಯೆ ಕಲೆ ಹಾಕುವುದು ಅವಶ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ನಾಳೆಯಿಂದಲೇ ಆರಂಭವಾಗುವಂತೆ ಜಂಟೀ ಸಮೀಕ್ಷೆ ನಡೆಸಿ, ಮಕ್ಕಳ ನಿಖರ ಮಾಹಿತಿ ಪಡೆಯಬೇಕು ಎಂದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here