Friday 26th, April 2024
canara news

ನೇತ್ರಾವತಿ ರಕ್ಷಣೆಗೆ ದ.ಕ. ಜಿಲ್ಲೆಯ ಜನರಿಂದ 'ನೋಟಾ'ದ ಪಾಠ

Published On : 28 Feb 2016   |  Reported By : Canaranews Network


ಮಂಗಳೂರು: ನೇತ್ರಾವತಿ ನದಿ ತಿರುವು ಯೋಜನೆ ಹೋರಾಟಕ್ಕೆ ಸ್ಪಂದಿಸದ ರಾಜಕೀಯ ಪಕ್ಷಗಳನ್ನು ತಿರಸ್ಕರಿಸಬೇಕೆಂಬ ಉದ್ದೇಶದಿಂದ ಈ ಬಾರಿಯ ಜಿ.ಪಂ. , ತಾ.ಪಂ. ಚುನಾವಣೆಯಲ್ಲಿ ಸಹ್ಯಾದ್ರಿ ಸಂಚಯ ತಂಡ ನೋಟಾ ಅಭಿಯಾನವನ್ನು ಕೈಗೊಂಡಿತ್ತು. ಚುನಾವಣೆಯಲ್ಲಿ ಇದಕ್ಕೆ ಉತ್ತಮ ಸ್ಪಂದನೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಸಂದರ್ಭದೊಳಗೆ ಎತ್ತಿನಹೊಳೆ ಯೋಜನೆಯನ್ನು ಯಾವುದೇ ರಾಜಕೀಯ ಪಕ್ಷ ತಡೆಯದೇ ಇದ್ದಲ್ಲಿ ಜಿಲ್ಲೆಯಾದ್ಯಂತ ನಗರ ಮತ್ತು ಹಳ್ಳಿ ಪ್ರದೇಶಗಳಿಗೆ ಹೋಗಿ ನೇತ್ರಾವತಿ ನದಿ ತಿರುವು ಯೋಜನೆ ಬಗ್ಗೆ ಮತ್ತು ಈ ಯೋಜನೆ ಬೆಂಬಲಿಸುವ ಜನಪ್ರತಿನಿಧಿಗಳಿಗೆ ನೋಟಾ ಮತ ನೀಡಿ ತಿರಸ್ಕರಿಸುವ ಬೃಹತ್‌ ಕಾರ್ಯರೂಪವನ್ನು ಸಹ್ಯಾದ್ರಿ ಸಂಚಯ ಮಾಡಲಿದೆ ಸಂಚಯದ ಪ್ರಮುಖ ದಿನೇಶ್‌ ಹೊಳ್ಳ ತಿಳಿಸಿದ್ದಾರೆ..

ಕಳೆದ ಲೋಕಸಭಾ ಚುನಾವಣೆಯಲ್ಲಿ ಸಹ್ಯಾದ್ರಿ ಸಂಚಯ ನೋಟಾ ಅಭಿಯಾನವನ್ನು ಕೈಗೊಂಡಿದ್ದಾಗ 7,800 ನೋಟಾ ಮತಗಳು ಲಭಿಸಿದ್ದು, ಈ ಬಾರಿ (28,817 ಮತಗಳು) ಅದರ ನಾಲ್ಕು ಪಟ್ಟು ಹೆಚ್ಚು ಮತಗಳು ಲಭಿಸಿದ ಕಾರಣ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಧಕ್ಕೆಯಾಗುವುದಂತೂ ಖಂಡಿತ. ಜತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಜನಾಕ್ರೋಶವನ್ನು ಒಟ್ಟು ಸೇರಿಸಿ ರಾಜಕೀಯ ಪಕ್ಷಗಳಿಗೆ ಬುದ್ಧಿ ಕಲಿಸುವ ರೀತಿಯಲ್ಲಿ, ಅವರನ್ನು ಸೋಲಿಸುವ ಪಣ ತೊಟ್ಟು ನೇತ್ರಾವತಿ ಪರವಾಗಿ ಅಭ್ಯರ್ಥಿಗಳನ್ನು ನಿಲ್ಲಿಸಿ ರಾಜಕೀಯ ಪಕ್ಷಗಳ ಗೆಲುವಿಗೆ ಕಡಿವಾಣ ಹಾಕುವಂತೆ ಸಹ್ಯಾದ್ರಿ ಸಂಚಯ ತೀವ್ರವಾಗಿ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here