Saturday 20th, April 2024
canara news

ಪತ್ರಕರ್ತರಿಗೆ ಸೂಕ್ತ ಸುರಕ್ಷೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭರವಸೆ

Published On : 01 Mar 2016   |  Reported By : Rons Bantwal


ಮಂಗಳೂರು, ಮಾ.01: ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಸೂಚನೆ ನೀಡುತ್ತೇನೆ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಪತ್ರಕರ್ತರಿಗೆ ಭರವಸೆ ನೀಡಿದರು.

ಮಾಧ್ಯಮದವರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.

ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಪಿ.ಬಿ. ಹರೀಶ್ ರೈ, ಮಹಮ್ಮದ್ ಆರೀಫ್, ಪುಷ್ಪರಾಜ್ ಬಿ.ಎನ್, ಜಿತೇಂದ್ರ ಕುಂದೇಶ್ವರ, ತಾರಾನಾಥ ಕಾಪಿಕ್ಕಾಡ್, ಪ್ರಕಾಶ್ ಪಾಂಡೇಶ್ವರ, ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here