Thursday 25th, April 2024
canara news

ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷಾ ವಿವರ

Published On : 07 Mar 2016   |  Reported By : Canaranews Network


ಮಂಗಳೂರು: ಪ್ರಸಕ್ತ ವರ್ಷ ದ.ಕ.ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ೩೩,೮೫೧ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆಗೆ ೩೪,೭೬೦ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಹಿತಿ ನೀಡಿದ ಅವರು, ಎಸ್ ಎಸ್ ಎಲ್ ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಅಂತಿಮ ಸಿದ್ಧತೆಗಳ ಪರಿಶೀಲನೆ ನಡೆಸಲು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ದ.ಕ.ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಪರೀಕ್ಷಾ ಪದ್ಧತಿಯು ಉತ್ತಮ ರೀತಿಯಲ್ಲಿದೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ, ಪ್ರಾಮಾಣಿಕರಾಗಿ ಪರೀಕ್ಷೆ ಬರೆಯುವ ಸಂಪ್ರದಾಯ ಹಿಂದಿನಿಂದಲೇ ಇದೆ. ಈ ಹೆಸರನ್ನು ಮುಂದೆಯೂ ಉಳಿಸಿಕೊಳ್ಳುವಂತೆ ಅವರು ಕರೆ ನೀಡಿದರು.ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀ ವಿದ್ಯಾ, ಅಪರ ಜಿಲ್ಲಧಿಕಾರಿ ಕುಮಾರ್, ಹೆಚ್ಚುವರಿ ಎಸ್ಪಿ ವಿ.ಶಾಂತಕುಮಾರ್ ಮೊದಲಾದವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here