Friday 29th, March 2024
canara news

ಮಂಗಳೂರು ಪಾಲಿಕೆ ಚುನಾವಣೆ: ನೂತನ ಮೇಯರ್, ಉಪಮೇಯರ್ ಆಯ್ಕೆ

Published On : 12 Mar 2016   |  Reported By : Canaranews Network   |  Pic On: photo credit: The Hindu

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ೧೮ನೇ ಅವಧಿಯ ನೂತನ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಹರಿನಾಥ್ ಬೊಂದೇಲ್ ಹಾಗೂ ಉಪಮೇಯರ್ ಆಗಿ ಸುಮಿತ್ರಾ ಕರಿಯ ಆಯ್ಕೆಯಾಗಿದ್ದಾರೆ.

ಮ.ನ.ಪಾ. ಮಂಗಳ ಸಭಾಂಗಣದಲ್ಲಿ ಮೇಯರ್, ಉಪಮೇಯರ್ ಹಾಗೂ ೪ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಕೂಡ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಾಬಲ್ಯ ಹೊಂದಿದ್ದರೂ ಮೀಸಲಾತಿ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನ ಬಿಜೆಪಿ ಅಭ್ಯರ್ಥಿಯ ಪಾಲಾಗಿದೆ.

ಈ ಬಾರಿ ಉಪಮೇಯರ್ ಸ್ಥಾನವು ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್ ನಲ್ಲಿ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿಯ ಪರಿಶಿಷ್ಟ ಪಂಗಡದ ಏಕೈಕ ಮಹಿಳೆ ಸುಮಿತ್ರಾ ಕರಿಯಾಗೆ ಉಪಮೇಯರ್ ಪಟ್ಟ ಲಭಿಸಿದೆ.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here