Friday 19th, April 2024
canara news

ಪುತ್ತೂರು ದೇವಳ ಆಮಂತ್ರಣ ವಿವಾದ: ರಿಟ್ ಅರ್ಜಿಯ ವಿಚಾರಣೆ ಮಾ.24ಕ್ಕೆ ಮುಂದೂಡಿಕೆ

Published On : 22 Mar 2016   |  Reported By : Canaranews Network


ಮಂಗಳೂರು:ದ.ಕ.ಜಿಲ್ಲೆಯ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿವಾದಕ್ಕೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟು ಮತ್ತೆ ಮಾ.24ಕ್ಕೆ ಮುಂದೂಡಿದೆ.

ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಭಕ್ತರನ್ನು ಆಮಂತ್ರಿಸುವವರಾಗಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಹೆಸರನ್ನು ಮುದ್ರಿಸಿರುವುದನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಪುತ್ತೂರು ಪ್ರಖಂಡ ಕಾರ್ಯದರ್ಶಿ ನವೀನ್ ಕುಲಾಲ್ ಅವರು ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಕಳೆದ ಮಾರ್ಚ್18ರಂದು ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು. ಸೋಮವಾರ ಮತ್ತೆ ಹೈಕೋರ್ಟು ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿದೆ.

ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಭಕ್ತರನ್ನು ಜಾತ್ರೋತ್ಸವಕ್ಕೆ ಆಮಂತ್ರಿಸುವವರಾಗಿ ಅನ್ಯ ಮತೀಯರಾದ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರ ಹೆಸರನ್ನು ಮುದ್ರಿಸಿರುವ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟಿಗೆ ಸಲ್ಲಿಸಲಾಗಿದ್ದ ರಿಟ್ ಅರ್ಜಿಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಮತ್ತು ಮುಜರಾಯಿ ಇಲಾಖೆಯ ಕಾರ್ಯದರ್ಶಿ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು, ದ.ಕ. ಜಿಲ್ಲಾ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಇಲಾಖೆಯ ಆಯುಕ್ತರು, ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿ ಮತ್ತು ಕಾರ್ಯ ನಿರ್ವಹಣಾಧಿಕಾರಿ ಹಾಗೂ ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿತ್ತು.

ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವಕ್ಕೆ ಸಂಬಂಧಿಸಿ ಫೆ. 18 ರಂದು ಮುದ್ರಿಸಲಾದ ಆಮಂತ್ರಣ ಪತ್ರಿಕೆಯಲ್ಲಿ ಐದನೇ ಪ್ರತಿವಾದಿಯಾಗಿರುವ ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರ ಹೆಸರು ಮುದ್ರಿಸಿರುವುದರಿಂದ ಈ ಆಮಂತ್ರಣ ಪತ್ರಿಕೆಯನ್ನು ವಿತರಿಸಬಾರದು. ಅಲ್ಲದೆ ಐದನೇ ಪ್ರತಿವಾದಿಯವರು ದೇವಾಲಯದ ಆಡಳಿತಾತ್ಮಕ ವಿಷಯದಲ್ಲಿ ಪ್ರವೇಶ ಮಾಡಬಾರದು. ಮತ್ತು ಈ ಕುರಿತು ಸಮಸ್ಯೆ ಪರಿಹಾರಾತ್ಮಕ ಮಧ್ಯಂತರ ಆದೇಶವನ್ನು ನ್ಯಾಯಾಲಯ ನೀಡಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here