ಮಂಗಳೂರು: ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಬಂಧಿತನನ್ನು ಮೆಲ್ವಿನ್ ವಿಶ್ವಾಸ್ (೨೭) ಎಂದು ಗುರುತಿಸಲಾಗಿದೆ.
ಮಂಗಳೂರಿನ ಕದ್ರಿ ಗ್ರಾಮದ ವ್ಯಾಸನಗರದಲ್ಲಿರುವ ವಿಶ್ವಾಸ್ ಬಾವ ಬಿಲ್ಡರ್ನ್ ಆಶಾಕಿರಣ ಅಪಾರ್ಟ್ ಮೆಂಟ್ ಪ್ಲಾಟ್ ನಂಬರ್ ೩೧೦ರಲ್ಲಿ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ವಿಶ್ವಕಪ್ ೨೦-೨೦ ಕ್ರಿಕೆಟ್ ಪಂದ್ಯಾವಳಿಯ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಎಂಬ ಅಕ್ರಮ ಜೂಜಾಟವನ್ನು ನಡೆಸಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಬಗ್ಗೆ ಮಂಗಳೂರು ನಗರ ಅಪರಾಧ ಪತ್ತೆ ವಿಭಾಗ ಪೊಲೀಸರಿಗೆ ದೊರೆತ ಖಚಿತ ವರ್ತಮಾನದಂತೆ ಬೆಟ್ಟಿಂಗ್ ನಡೆಸುತ್ತಿದ್ದ ಆಶಾಕಿರಣ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ನಂಬರ್ ೩೧೦ ರಲ್ಲಿದ್ದ ಮನೆಗೆ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೆಲ್ವಿನ್ ವಿಶ್ವಾಸ್ ನನ್ನು ಬಂಧಿಸಿದ್ದಾರೆ.
ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್ ಅವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶಾಂತರಾಜು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.