Saturday 20th, April 2024
canara news

ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿಎಸ್‌ವೈ ಆಯ್ಕೆ ಕಾಂಗ್ರೆಸ್‌ಗೆ ಲಾಭ; ಜನಾರ್ಧನ ಪೂಜಾರಿ

Published On : 10 Apr 2016   |  Reported By : Canaranews Network


ಮಂಗಳೂರು: ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕಾಂಗ್ರೆಸ್‌ಗೆ ವರದಾನವಾಗಲಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಎಸ್‌. ಯಡಿಯೂರಪ್ಪ ಅವರ ಆಯ್ಕೆ ಬಿಜೆಪಿಯ ಆಂತರಿಕ ವಿಚಾರವಾಗಿದ್ದರೂ ಇದರಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂಬ ಕಾರಣಕ್ಕೆ ಈ ವಿಷಯ ಪ್ರಸ್ತಾಪಿಸುತ್ತಿದ್ದೇನೆ. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದ ರಿಂದ ಕಾಂಗ್ರೆಸ್‌ ಪಕ್ಷಕ್ಕೆ ಆನೆ ಬಲ ಬಂದಿದೆ.

ಇದರಿಂದ 2018ರ ಚುನಾ ವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಗೆಲ್ಲುವುದು ಖಚಿತ.ಕಾಂಗ್ರೆಸ್‌ ಮುಕ್ತ ಕರ್ನಾಟಕ ಸಾಧ್ಯವಾಗದು ತನ್ನ ಆಯ್ಕೆ ಘೋಷಣೆ ಆದ ಬಳಿಕ ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೂಗೆಯುತ್ತೇನೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ಯಡಿಯೂರಪ್ಪ ಅವರಿಂದ ಸಾಧ್ಯವಿಲ್ಲ. ಪ್ರಧಾನಿ ಮೋದಿಯೂ ಕಾಂಗ್ರೆಸ್‌ ಮುಕ್ತ ಭಾರತದ ಹೇಳಿಕೆ ನೀಡಿದ್ದರು. ಅಧಿಕಾರ ಬಂದು ಎರಡು ವರ್ಷ ಆದರೂ ಮೋದಿ ಅವರಿಂದ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಸಾಧ್ಯವಾಗಿಲ್ಲ ಎಂದು ಹೇಳಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here