Friday 26th, April 2024
canara news

ವಿನಾಯಕ್ ಬಾಳಿಗ ಹತ್ಯೆ ಪ್ರಕರಣ;ಇನ್ನೋರ್ವ ಆರೋಪಿಯ ಬಂಧನ

Published On : 18 May 2016   |  Reported By : Canaranews Network


ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶೈಲೇಸ್ ಅಲಿಯಾಸ್ ಶೈಲು ಬಂಧಿತ ಆರೋಪಿ. ಶೈಲೇಶ್ ಕಳೆದ ೮ ವರ್ಷಗಳಿಂದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧಿಕೃತ ಕಾರು ಚಾಲಕನಾಗಿದ್ದ. ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈ ಹಾಗೂ ಆತನ ಸಹಚರ ಶ್ರೀಕಾಂತ್ ಜೊತೆ ಕೈಜೋಡಿಸಿ ಈತ ವಿನಾಯಕ್ ಬಾಳಿಗ ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಕಿಲ್ಲರ್ ಗಳಾದ ವಿನಿತ್ ಪೂಜಾರಿ, ನಿಶಿತ್ ದೇವಾಡಿಗ, ಶಿವನನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಗಳು ನೀಡಿದ ಸುಳಿವಿನ ಆಧಾರದಲ್ಲಿ ನಮೋ ಬ್ರಿಗೇಡ್ ನಾಯಕ ನರೇಶ್ ಹಾಗೂ ಇತರರು ಬಾಳಿಗ ಹತ್ಯೆಗೆ ಸುಪಾರಿ ನೀಡಿದ್ದರು ಎಂಬ ಅಂಶ ಬಯಲಾಗಿತ್ತು.ನರೇಶ್ ಶೆಣೈ ಕಳೆದ ಒಂದುವರೆ ತಿಂಗಳಿನಿಂದ ತಲೆ ಮರೆಸಿಕೊಂಡಿದ್ದು, ಆತನ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here