Wednesday 24th, April 2024
canara news

ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Published On : 23 May 2016   |  Pic On: Photo credit : The Hindu


ಮಂಗಳೂರು: ಮಂಗಳೂರಿನ ಕೆಂಜಾರಿನಲ್ಲಿ ಆರು ವರ್ಷಗಳ ಹಿಂದೆ ಸಂಭವಿಸಿದ ವಿಮಾನ ದುರಂತದಲ್ಲಿ ಮಡಿದವರಿಗೆ ರವಿವಾರ ಕೂಳೂರು ಸ್ಮಾರಕ ಸ್ಥಳದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾಧಿನಾಥ ರೈ ಅವರು ಸಮಾಧಿ ಸ್ಥಳದಲ್ಲಿ ಹೂಗುಚ್ಛ ಇಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಮೃತರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಕಾಲ ಮೌನ ಪ್ರಾರ್ಥನೆ ನಡೆಸಲಾಯಿತು.

ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಟಿ. ರಾಧಾಕೃಷ್ಣ, ನವಮಂಗಳೂರು ಬಂದರು ಮಂಡಳಿ ಡೆಪ್ಯುಟಿ ಚೇರ್‌ಮನ್‌ ಸುರೇಶ್‌ ಪಿ. ಶಿರ್ವಾಡ್ಕರ್‌, ಕಾರ್ಪೊರೇಟರ್‌ ರಘುವೀರ್‌ ಪಣಂಬೂರು, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಅಪರ ಜಿಲ್ಲಾಧಿಕಾರಿ ಕುಮಾರ್‌, ವಿಮಾನ ನಿಲ್ದಾಣದ ಪ್ರಮುಖ ಅಧಿಕಾರಿಗಳಾದ ಎಜಿಎಂ ಪುಲ್ಮಾರೆ, ಎಲ್‌.ಕೆ. ಸಿಂಗ್‌, ಗೋವರ್ಧನ ರೆಡ್ಡಿ , ಜನಾದ‌ìನ್‌ ಮತ್ತಿತರರು ಉಪಸ್ಥಿತರಿದ್ದರು.

2010ರ ಮೇ 22ರಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಬಜಪೆ ವಿಮಾನ ನಿಲ್ದಾಣದ ಸಮೀಪವೇ ಇರುವ ಕೆಂಜಾರಿನಲ್ಲಿ ಏರ್‌ ಇಂಡಿಯಾ ವಿಮಾನ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ ಮಕ್ಕಳು ಸೇರಿದಂತೆ ಒಟ್ಟು 158 ಮಂದಿ ಪ್ರಯಾಣಿಕರು ಜೀವಂತ ಭಸ್ಮವಾದರು. ಕೇವಲ 8 ಮಂದಿ ಬದುಕುಳಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here