Thursday 28th, March 2024
canara news

ಎತ್ತಿನಹೊಳೆ ಯೋಜನೆ ವಿಚಾರ; ಸರ್ವ ಪಕ್ಷಗಳ ಮುಖಂಡರ ಭೇಟಿಗೆ ನಿರ್ಧಾರ

Published On : 26 May 2016   |  Reported By : Canaranews Network

ಮಂಗಳೂರು: ಎತ್ತಿನ ಹೊಳೆ ಯೋಜನೆ ವಿರುದ್ಧದ ಮುಂದಿನ ಹಂತದ ಹೋರಾಟದ ಭಾಗವಾಗಿ ಸರಕಾರದ ಮೇಲೆ ಒತ್ತಡ ತರಲು ಸರ್ವ ಪಕ್ಷಗಳ ನಾಯಕರನ್ನು ಭೇಟಿಯಾಗಿ ಬಳಿಕ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯಲು ಉದ್ದೇಶಿಸಲಾಗಿದೆ ಎಂದು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಕೆ. ವಿಜಯ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ. ವಿವಿಧ ಪಕ್ಷಗಳ ಮುಖಂಡರಾದ ಡಾ| ಜಿ. ಪರಮೇಶ್ವರ್‌, ಬಿ.ಎಸ್‌. ಯಡಿಯೂರಪ್ಪ,ಎಚ್‌.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಅವರನ್ನು ಭೇಟಿಯಾಗಿ ವಿಷಯ ಮನವರಿಕೆ ಮಾಡಿ ಬಳಿಕ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು.

ವಿವಿಧ ಧಾರ್ಮಿಕ ಮುಖಂಡರು, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕರು ಮತ್ತು ಸರ್ವ ಪಕ್ಷಗಳ ನಾಯಕರು ನಿಯೋಗದಲ್ಲಿರುವರು ಎಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here