Thursday 25th, April 2024
canara news

ಪೂಜಾರಿಗೆ ಮಂಪರು ಪರೀಕ್ಷೆ ಅಗತ್ಯ: ಹೇಮನಾಥ ಶೆಟ್ಟಿ

Published On : 08 Jun 2016   |  Reported By : Canaranews Network


ಮಂಗಳೂರು: ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ರಾಜಕಾರಣಿ ಜನಾರ್ದನ ಪೂಜಾರಿ ಅವರು ಪಕ್ಷದ ಸೂಚನೆ, ನಿಯಮಗಳನ್ನು ಮೀರಿ ತಮ್ಮ ಪಕ್ಷದ ಸರಕಾರದ ಕುರಿತೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತಾವು ಪ್ರತಿನಿಧಿಸುವ ಕಾಂಗ್ರೆಸ್‌ ಪಕ್ಷವನ್ನು ದೂರುವ ಮೂಲಕ ವಿಪಕ್ಷ ಬಿಜೆಪಿಗೆ ಲಾಭ ಮಾಡಿಕೊಡುತ್ತಿರುವ ಅವರ ಬಗ್ಗೆ ಕಾಂಗ್ರೆಸ್‌ ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಡಿಸಬೇಕು ಎಂದು ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಎ. ಹೇಮನಾಥ ಶೆಟ್ಟಿ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ದೇಶದ ವಿತ್ತ ಸಚಿವರಾಗಿದ್ದವರು, ಇಂದಿರಾ ಗಾಂಧಿ ಅವರ ಸರಕಾರದಲ್ಲಿ ಕೆಲಸ ಮಾಡಿದ ಅನುಭವಿಯಾದ ಪೂಜಾರಿಯವರು ಈ ರೀತಿ ಅಸಂಬದ್ಧವಾಗಿ ಮಾತಧಿನಾಡುತ್ತಿದ್ದರೂ ಹೈಕಮಾಂಡ್‌ ಮೌನ ವಹಿಸಿರುವುದು ವಿಶೇಷವಾಗಿ ಕಾಣಿಸುತ್ತಿದೆ ಎಂದರು.

ಅಭಿವೃದ್ಧಿಯ ಸಮೀಕ್ಷೆಯಲ್ಲಿ ಕರ್ನಾಟಕ ರಾಜ್ಯ ದೇಶಕ್ಕೇ 2ನೇ ಸ್ಥಾನ ಪಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುವ ಮೂಲಕ ಜನಪ್ರಿಯ ಸರಕಾರವಾಗಿ ಮೂಡಿಬಂದಿದೆ. ವಿಪಕ್ಷದವರೂ ಮನಸ್ಸಿಧಿನಲ್ಲೇ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕ ಅಸಂಬದ್ಧವಾಗಿ ಮಾತನಾಡುವ ಮೂಲಕ ಕಾರ್ಯಕರ್ತರಿಗೆ, ನಾಯಕರಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here