Friday 19th, April 2024
canara news

ಡಿವಿಎಸ್‌, ಮೊಯಿಲಿ ಜೂ.೧೧ರಂದು ಮಂಗಳೂರು ಭೇಟಿ; ಕಪ್ಪು ಪಟ್ಟಿ ಪ್ರದರ್ಶನಕ್ಕೆ ನಿರ್ಧಾರ

Published On : 08 Jun 2016   |  Reported By : Canaranews Network

ಮಂಗಳೂರು: ಎತ್ತಿನಹೊಳೆ ಯೋಜನೆಯ ರೂವಾರಿಗಳಾದ ಡಿ.ವಿ. ಸದಾನಂದ ಗೌಡ ಹಾಗೂ ವೀರಪ್ಪ ಮೊಲಿ ಅವರು ಜೂ. 11ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದು, ಅವರಿಗೆ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಕರಿಪತಾಕೆ ಪ್ರದರ್ಶಿಸಲಾಗುವುದು ಎಂದು ಸಂಯುಕ್ತ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.2018ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ವೀರಪ್ಪ ಮೊಲಿ ಹೇಳಿಕೆ ನೀಡುತ್ತಾರೆ.

ಆದರೆ ಈತನಕ ಯಾವುದೇ ಯೋಜನೆ ಹೇಳಿದ ಸಮಯಕ್ಕೆ ಮುಗಿದ ಉದಾಹರಣೆ ಇಲ್ಲ. ಅವರು ಇಂತಹ ಹೇಳಿಕೆ ಮೂಲಕ ಹೋರಾಟಕ್ಕೆ ಸವಾಲು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಕಾನೂನು ರೀತಿಯ ಹೋರಾಟಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ವಿಜಯ ಕುಮಾರ್‌ ಶೆಟ್ಟಿ ಆರೋಪಿಸಿದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here