Saturday 20th, April 2024
canara news

ಕುಂದಾಪುರ ಸೈಂಟ್ ಮೇರಿಸ್ ವಿದ್ಯಾ ಸಂಸ್ಥೆ:ಪ್ರಾರಂಭೋತ್ಸವ

Published On : 13 Jun 2016   |  Reported By : Bernard J Costa


ಕೋಟ: ಈ ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಪಾಲಿಗೆ ಶುಭದಿನಗಳಾಗಲಿ. ಸೈಂಟ್‍ಮೇರಿಸ್ ವಿದ್ಯಾಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರ ಜತೆಗೆ ಗುರು ಹಿರಿಯರನ್ನು ಗೌರವಿಸುವ ವಿದ್ಯಾರ್ಥಿಗಳಾಗಬೇಕು ಎಂದು ಕುಂದಾಪುರ ವಲಯದ ಧರ್ಮಗುರುಗಳು, ಶಾಲಾ ಸಂಚಾಲಕರೂ ಆದ ಅತೀ.ವಂ.ಫಾ. ಅನಿಲ್ ಡಿಸೋಜಾ ಹೇಳಿದರು. ಅವರು ಶುಕ್ರವಾರ ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಸೈಂಟ್‍ಮೇರಿಸ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸರಕಾರ ನೀಡಿದ ಉಚಿತ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸೈಂಟ್‍ಮೇರಿಸ್ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನಾ ವಿಧಿ ನೆರವೇರಿತು. ವೇದಿಕೆಯಲ್ಲಿ ಸೈಂಟ್‍ಮೇರಿಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಚೇತನಾ ಉಪಸ್ಥತರಿದ್ದರು. ಶಿಕ್ಷಕರಾದ ಭಾಸ್ಕರ್ ಗಾಣಿಗ ಸ್ವಾಗತಿಸಿದರು. ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು. ಸೈಂಟ್‍ಮೇರಿಸ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಡೋರಾ ಸುವಾರಿಸ್ ವಂದಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here