Friday 29th, March 2024
canara news

ಡೆಂಗ್ಯೂ- ಎಲಿಸಾ ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದರೆ ಕ್ರಮ: ಸಚಿವ ಖಾದರ್‌

Published On : 14 Jun 2016   |  Reported By : Canaranews Network


ಮಂಗಳೂರು: ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ ಸಮಸ್ಯೆ ಹಿನ್ನೆಲೆಯಲ್ಲಿ ನಡೆಸುವ ಎಲಿಸಾ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳು ನಿಗದಿತ ಮೊತ್ತಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಕುರಿತು ದ.ಕ. ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಖಾದರ್‌ ಹೇಳಿದರು.ಮಂಗಳೂರಿನ ಸರ್ಕ್ಯೂಟ್‌ ಹೌಸ್‌ನಲ್ಲಿ ಸೋಮವಾರ ಆರೋಗ್ಯ ಸಚಿವ ಯು.ಟಿ. ಖಾದರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ರೋಗ ಪತ್ತೆಗಾಗಿ ನಡೆಸುವ ಎಲಿಸಾ ಪರೀಕ್ಷೆಗೆ 500 ರೂ. ನಿಗದಿಪಡಿಸಲಾಗಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ 2,000 ರೂ. ತನಕ ಶುಲ್ಕ ಪಡೆಯಲಾಗುತ್ತಿದೆ ಎಂದು ಅವರು ಹೇಳಿದರು.ಡೆಂಗ್ಯೂ ರೋಗದ ವೇಳೆ ರಕ್ತಕಣಗಳು ಕತ್ತವೆ ಎಂಬ ಆತಂಕ ಸೃಷ್ಟಿಸಿ ಜನರನ್ನು ಗಾಬರಿಗೊಳಿಸಲಾಗುತ್ತಿದೆ.

ಕೆಲವೊಮ್ಮೆ ಅಗತ್ಯವಿಲ್ಲದವರಿಗೂ ರಕ್ತಕಣಗಳನ್ನು ನೀಡುವ ಕೆಲಸ ಮಾಡಲಾಗುತ್ತಿದೆ. ಜನರಲ್ಲಿ ಈ ರೋಗ ಲಕ್ಷಣಗಳ ಬಗ್ಗೆ ಹಾಗೂ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಡಾ| ಶ್ರೀನಿವಾಸ ಕಕ್ಕಿಲ್ಲಾಯ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಷ್ಟೇ ಮಳೆಗಾಲ ಪ್ರಾರಂಭವಾಗುತ್ತಿದೆ. ಮುಂದಿನೆರಡು ತಿಂಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಅಧಿಕವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here