Friday 19th, April 2024
canara news

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ;ಆರೋಪಿ ಬಂಧನ

Published On : 23 Jun 2016   |  Reported By : Canaranews Network


ಮಂಗಳೂರು: ಐದರ ಹರೆಯ ಬಾಲಕನೋರ್ವನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದ್ದು, ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಕೋಟೆಕಾರು ಸಮೀಪ ಬಾಡಿಗೆ ಮನೆಯಲ್ಲಿ ವಾಸವಿರುವ ಹರೀಶ್ ಬಂಗೇರ(೪೦) ಬಂಧಿತ ಆರೋಪಿ.

ಈತ ಕೋಟೆಕಾರುವಿನಲ್ಲಿ ಬಾಡಿಗೆಗೆ ಇದ್ದ ಮನೆ ಮಾಲಕರ ೫ರ ಹರೆಯದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿರುವ ಹರೀಶ್ ಬೈಕಂಪಾಡಿ ಸಮೀಪ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದಾನೆ. ಬಾಲಕನನ್ನು ಪುಸಲಾಯಿಸಿ ಈತ ಲೈಂಗಿಕ ದೌರ್ಜ್ಯನ್ಯವೆಸಗಿದ್ದ. ಬಾಲಕ ನೀಡಿದ ಮಾಹಿತಿಯಂತೆ ಹೆತ್ತವರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಅದರಂತೆ ಉಳ್ಳಾಲ ಠಾಣಾ ಪೊಲೀಸರು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here