Thursday 25th, April 2024
canara news

ವಿಧಾನಸಭಾ ಚುನಾವಣೆಗೆ ಸನ್ನದ್ಧರಾಗೋಣ: ಸಂಸದ ನಳಿನ್‌

Published On : 03 Jul 2016   |  Reported By : Canaranews Network


ಮಂಗಳೂರು: ಇನ್ನೆರಡು ವರ್ಷಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದ್ದು ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಸ್ಥಾನ ಗಳನ್ನು ಗೆಲ್ಲುವ ಸವಾಲು ನಮ್ಮ ಮುಂದಿದೆ. ಇದನ್ನು ಸಮರ್ಥವಾಗಿ ಎದುರಿಸಿ ದ.ಕ. ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸೋಣ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಮಂಗಳೂರಿನ ಪುರಭವನದಲ್ಲಿ ಶನಿವಾರ ನಡೆದ ಬಿಜೆಪಿ ದ.ಕ. ಜಿಲ್ಲಾ ನೂತನ ಅಧ್ಯಕ್ಷ ಸಂಜೀವ ಮಠಂದೂರು ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಒಂದು ಶಾಸಕ ಸ್ಥಾನ ದೊರಕಿತ್ತು. ಆಗ ಜಿಲ್ಲೆಯಲ್ಲಿ ಬಿಜೆಪಿ ಮುಳುಗುವ ಹಡಗು ಎಂದು ಟೀಕೆ ಮಾಡಿದ್ದರು. ಅನಂತರ ನಡೆದ ಲೋಕಸಭಾ ಚುನಾವಣೆ, ಗ್ರಾಮ ಪಂಚಾಯತ್‌, ಜಿಲ್ಲಾ, ತಾಲೂಕು ಪಂಚಾಯತ್‌, ನಗರಾಡಳಿತ ಸಂಸ್ಥೆಗಳಲ್ಲಿ ಬಿಜೆಪಿ ಅಭೂತಪೂರ್ವ ವಿಜಯ ಸಾಧಿಸಿತು. ಮುಂಬರುವ ಚುನಾವಣೆಯಲ್ಲೂ ಎಲ್ಲ ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಇದು ಪುನಾರಾರ್ವತನೆಯಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಂಘಟಿತರಾಗಿ ಶ್ರಮಿಸಬೇಕು ಎಂದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here