Saturday 20th, April 2024
canara news

ಜುಲೈ ೧೧ರವರೆಗೆ ನರೇಶ್ ಶೆಣೈಗೆ ನ್ಯಾಯಾಂಗ ಬಂಧನ

Published On : 03 Jul 2016   |  Reported By : Canaranews Network

ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಮಂಗಳೂರಿನ ಜಿಲ್ಲಾ ೩ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯವು ಶೆಣೈಗೆ ಜುಲೈ ೧೧ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಮಾ.೨೧ರಂದು ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಅವರನ್ನು ಮಂಗಳೂರಿನ ಪಿವಿಎಸ್ ಕಲಾಕುಂಜದ ಬಳಿ ಹತ್ಯೆಗೈಯಲ್ಲಾಗಿತ್ತು. ಘಟನೆ ಬಳಿಕ ಆರೋಪಿ ನರೇಶ್ ಶೆಣೈ ೯೨ ದಿನಗಳ ಕಾಲ ತಲೆ ಮರೆಸಿಕೊಂಡಿದ್ದನು.

ಬಂಧನದ ಬಳಿಕ ನರೇಶ್ ಶೆಣೈಯನ್ನು ಜೂನ್ ೨೭ರಂದು ಮಂಗಳೂರಿನ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು,ಅಂದು ೩ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಅ ಬಳಿಕ ಶನಿವಾರ ಮತ್ತೆ ಬರ್ಕೆ ಪೊಲೀಸರು ಶೆಣೈ ನನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಗೆ ಜುಲೈ ೧೧ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here