Friday 26th, April 2024
canara news

ಟ್ಯಾಂಕರ್‌ಗಳಿಗೆ ನಿಲುಗಡೆ : ಗೋಳಿತ್ತೂಟ್ಟು ಬಳಿ ಜಾಗ ಗುರುತು

Published On : 12 Jul 2016   |  Reported By : Canaranews Network


ಮಂಗಳೂರು: ಟ್ಯಾಂಕರ್‌ಗಳಿಗೆ ರಾಷ್ಟ್ರೀಯ ಹೆದ್ದಾರಿ ಬಳಿ ನಿಲುಗಡೆಗಾಗಿ 3 ತಾಣಗಳನ್ನು ಒದಗಿಸುವ ಪ್ರಸ್ತಾವನೆ ಇದ್ದು ಇದರಲ್ಲಿ ಆರಂಭಿಕವಾಗಿ ನೆಲ್ಯಾಡಿ ಸಮೀಪದ ಗೋಳಿತೊಟ್ಟುವಿನಲ್ಲಿ 3 ಎಕ್ರೆ ಜಾಗ ಗುರುತಿಸಲಾಗಿದೆ.

ಎಲ್‌ಪಿಜಿ ಟ್ಯಾಂಕರ್‌ಗಳ ಸಂಚಾರದಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜರಗಿದ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು. ಹೆದ್ದಾರಿ ಪಕ್ಕದಲ್ಲಿ ಇನ್ನೆರಡು ತಾಣಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಅಪಘಾತಗಳಾದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗೆ 2 ಕ್ರೆನ್‌ಗಳನ್ನು ನಿಯೋಜನೆ ಮಾಡಲು ನಿರ್ಧರಿಸಲಾಗಿದೆ. ಉಪ್ಪಿನಂಗಡಿಯಲ್ಲಿ ತೈಲ ಕಂಪೆನಿಗಳ ಸಹಯೋಗದಲ್ಲಿ ತುರ್ತು ಸ್ಪಂದನಾ ಪಡೆ ನಿಯೋಜನೆ ಕುರಿತಂತೆ ಈಗಾಗಲೇ ಪೂರಕ ಕ್ರಮಗಳು ಆಗಿವೆ.

ಟ್ಯಾಂಕರ್‌ಗಳಿಗೆ ಜಿಪಿಎಸ್‌ ನಿಗಾ ವ್ಯವಸ್ಥೆ ಹಾಗೂ ಸ್ಪೀಡ್‌ ಗವರ್ನರ್‌ ಬಗ್ಗೆಯೂ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೂಷಣ್‌ ಜಿ. ಬೋರಸೆ ವಿವರಿಸಿದರು.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಅಪರ ಜಿಲ್ಲಾಧಿಕಾರಿ ಕುಮಾರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್‌.ಜಿ. ಹೆಗಡೆ, ಎಚ್‌ಪಿಸಿಎಲ್‌, ಬಿಪಿಸಿಎಲ್‌, ಐಒಸಿಎಲ್‌ ಮುಂತಾದ ಕಂಪೆನಿಗಳ ಅಧಿಕಾರಿಗಳು, ಅಗ್ನಿಶಾಮಕದಳದ ಅಧಿಕಾರಿಗಳು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here