Saturday 20th, April 2024
canara news

ಖಾಸಗಿ ಕಾಲೇಜುಗಳಲ್ಲಿ ಪಿಜಿ ಸೀಟು ಪ್ರವೇಶ 30ಕ್ಕೆ ನಿಗದಿ

Published On : 15 Jul 2016   |  Reported By : Canaranews Network


ಮಂಗಳೂರು: ಖಾಸಗಿ ಕಾಲೇಜುಗಳು ನಡೆಸುತ್ತಿರುವ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಈ ವರ್ಷದಿಂದ ವಿವಿಧ ವಿಭಾಗಗಳಲ್ಲಿ 30 ಸೀಟುಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಕೆ. ಭೈರಪ್ಪ ಅವರು ಬುಧವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪರೀಕ್ಷೆ ಫಲಿತಾಂಶ ಪ್ರಕಟನೆಯಲ್ಲಿ ಈ ವರ್ಷ ಸಮಸ್ಯೆಗಳಾಗದಂತೆ ಕ್ರಮ ವಹಿಸಲಾಗಿದೆ. ಮೌಲ್ಯಮಾಪಕರಿಗೆ ತರಬೇತಿ ನೀಡಲಾಗಿದೆ. ಇದರಿಂದ ಈ ವರ್ಷ ಫಲಿತಾಂಶ ಪ್ರಕಟನೆಯಲ್ಲಿ 10 ದಿನ ವಿಳಂಬವಾಗುವ ಸಾಧ್ಯತೆ ಇದೆ.ಸಂಶೋಧನೆಗೆ ಆದ್ಯತೆ ನೀಡಲಾಗುತ್ತಿದ್ದು, ಈ ದಿಶೆಯಲ್ಲಿ ವಿ.ವಿ. ಜತೆಗೆ ಸಹಕಾರ ಒಪ್ಪಂದಕ್ಕೆ ಉತ್ತೇಜನ ನೀಡಲಾಗುತ್ತಿದೆ. ಸ್ನಾತಕೋತ್ತರ ಪದವೀಧರರಾಗಿದ್ದು, ಕನಿಷ್ಠ 10 ವರ್ಷಗಳ ಬೋಧನಾನುಭವ ಇರುವ ಖಾಸಗಿ ಕಾಲೇಜುಗಳ ಪ್ರಾಧ್ಯಾಪಕರಿಗೆ ಅಧ್ಯಯನ ಮಂಡಳಿ ಸದಸ್ಯರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here