Friday 26th, April 2024
canara news

ಜೀತಪದ್ಧತಿ: ಸಮೀಕ್ಷೆಗೆ ಡಿಸಿ ಸೂಚನೆ

Published On : 15 Jul 2016   |  Reported By : Canaranews Network


ಮಂಗಳೂರು: ಜೀತಪದ್ಧತಿ ನಿರ್ಮೂಲನೆ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜೀತಪದ್ಧತಿ ನಿರ್ಮೂಲನೆ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಜೀತಗಾರಿಕೆ ನಿರ್ಮೂಲನೆ ಕಾಯಿದೆ ಅಡಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮಂಗಳೂರು ಹಾಗೂ ಪುತ್ತೂರು ಉಪ ವಿಭಾಗ ಮಟ್ಟದ ಸಮಿತಿ ರಚಿಸಲಾಗಿದೆ.ಸರಕಾರೇತರ ಸಂಘ ಸಂಸ್ಥೆಗಳಿಗೆ ಹಾಗೂ ಸಮಾಜ ಸೇವಕರಿಗೆ ಈ ಕಾಯಿದೆ ಬಗ್ಗೆ ಜಾಗೃತಿ ಮೂಡಿಸಲು ತರಬೇತಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಕಾರ್ಮಿಕ ಇಲಾಖೆಗೆ ಸೂಚಿಸಿದರು.

ಜೀತಪದ್ಧತಿಯಲ್ಲಿರುವವರನ್ನು ಪತ್ತೆಹಚ್ಚಿ, ಅವರಿಗೆ ಸೂಕ್ತ ಪುನರ್ವಸತಿ ಹಾಗೂ ಪರಿಹಾರ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕೆಂದು ಅವರು ತಿಳಿಸಿದರು.ಜೀತಪದ್ಧತಿ ಅಮಾನವೀಯವಾಗಿದ್ದು, ಇದನ್ನು ತಡೆಯಲು ಎಲ್ಲರೂ ಸಹಕಾರ ನೀಡಬೇಕು. ಜೀತಗಾರಿಕೆ ಬಗ್ಗೆ ಎಲ್ಲ ಸಂಬಂಧಪಟ್ಟವರಿಗೂ ಕಾಯಿದೆ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಜೀತಪದ್ಧತಿಯಲ್ಲಿ ತೊಡಗಿಕೊಂಡಿದ್ದ ಫಲಾನುಭವಿಗಳಿಗೆ 1ಲಕ್ಷ ರೂ.ಗಳ ವರೆಗೆ ಪುನರ್ವಸತಿ ಪ್ಯಾಕೇಜ್‌ ನೀಡಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಅವರು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಕುಮಾರ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ವೇದಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ಡಾ| ಅಶೋಕ್‌ ಮೊದಲಾದವರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here