Tuesday 23rd, April 2024
canara news

ಆರೋಗ್ಯವಂತ ಯುವಜನತೆ ಆಸ್ತಿ: ಲೋಬೊ

Published On : 25 Jul 2016   |  Reported By : Canaranews Network


ಮಂಗಳೂರು: ಆರೋಗ್ಯವಂತ ಸಮಾಜಕ್ಕೆ ಆರೋಗ್ಯವಂತ ಯುವ ಜನರನ್ನು ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಬೀಳದೇ ಸಮಾಜದ ಆಸ್ತಿಗಳಾಗಿ ರೂಪುಗೊಳ್ಳಬೇಕು ಎಂದು ಶಾಸಕ ಜೆ.ಆರ್‌. ಲೋಬೋ ಹೇಳಿದರು.ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಅಕಾಡೆಮಿ ಮತ್ತು ಕ್ಷೇಮದ ಮನೋವೈದ್ಯಕೀಯ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಿಶನ್‌ ಹೋಪ್‌ ಬ್ಯಾನರ್‌ನಡಿ ಜುಲೈ ತಿಂಗಳಿನಲ್ಲಿ ನಡೆಯುತ್ತಿರುವ "ಮಾದಕ ವ್ಯಸನದ ದುಷ್ಪರಿಣಾಮ ಮತ್ತು ಡಿ-ಎಡಿಕ್ಷನ್‌ನ ಪ್ರಾಮುಖ್ಯತೆ' ಕುರಿತು ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಗರದ ಸಿಟಿ ಸೆಂಟರ್‌ ಮಾಲ್‌ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಶನಿವಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಾದಕ ವ್ಯಸನ ಇಂದು ಸಮಾಜಕ್ಕೆ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ವಿದ್ಯಾರ್ಥಿ ಯುವಜನರೇ ಇದರ ದಾಸರಾಗುತ್ತಿರುವುದು ದುರಂತ. ಮಾದಕ ವ್ಯಸನಕ್ಕೆ ಬಲಿಬಿದ್ದು, ಇಡೀ ಜೀವನವನ್ನು ಹಾಳು ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಅದರಿಂದಾಗುವ ಅನಾಹುತಗಳನ್ನು ಅರಿತು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here