Thursday 28th, March 2024
canara news

ಸಮಗ್ರ ಮೀನುಗಾರಿಕಾ, ಕ್ರೀಡಾ ನೀತಿಗೆ ಪ್ರಯತ್ನ: ಸಚಿವ ಪ್ರಮೋದ್

Published On : 25 Jul 2016   |  Reported By : Canaranews Network   |  Pic On: Photo credit : The Hindu


ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಮತ್ಸ ಸಂಪತ್ತು ಸುಸ್ಥಿರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಮೀನುಗಾರಿಕಾ ನೀತಿ ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಕ್ರೀಡಾ ನೀತಿ ರೂಪಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ರಾಜ್ಯ ಮೀನುಗಾರಿಕಾ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದರು.ದ.ಕ. ಜಿಲ್ಲಾ ಸಮಸ್ತ ಮೊಗವೀರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮೊಗವೀರ ಯುವವೇದಿಕೆಯ ಸಂಚಾಲಕತ್ವದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಸ್ತುತ ದೇಶದಲ್ಲಿ ಸಮಗ್ರ ಮೀನುಗಾರಿಕಾ ನೀತಿ ಎಂಬುದಿಲ್ಲ. ಪರಿಣಾಮವಾಗಿ ರಾಜ್ಯದ ಮೀನುಗಾರರು ಮತ್ಸ Âಕ್ಷಾಮವೂ ಸೇರಿದಂತೆ ಆನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ದೇಶದ ಪಶ್ಚಿಮ ಕರಾವಳಿಯಲ್ಲಿ ಬರುವ ಎಲ್ಲ ಮೀನುಗಾರಿಕಾ ಇಲಾಖಾ ಸಚಿವರ ಸಭೆಯೊಂದನ್ನು ಕೇಂದ್ರ ಸರಕಾರದ ನೇತೃತ್ವದೊಂದಿಗೆ ಆಯೋಜಿಸಿ ಸಮಗ್ರ ಮೀನುಗಾರಿಕಾ ನೀತಿಯೊಂದರ ಜಾರಿಗೆ ಪ್ರಯತ್ನ ನಡೆಸಲಾಗುವುದು ಎಂದರು.ರಾಜ್ಯಕ್ಕೆ ಕ್ರೀಡಾನೀತಿಯೊಂದರ ಅಗತ್ಯವಿದೆ. ಕ್ರೀಡಾನೀತಿ ರೂಪಿಸಲು ಸಮಿತಿ ರಚನೆಯಾಗಿದ್ದರೂ ಹೆಚ್ಚಿನ ಪ್ರಗತಿ ಕಂಡಿಲ್ಲ. ತನ್ನ ಅವಧಿಯಲ್ಲಿ ಈ ನಿಟ್ಟಿನಲ್ಲಿ ಕಾಯೊìàನ್ಮುಖವಾಗಿ ಒಂದು ಸಮಗ್ರ ಕ್ರೀಡಾ ನೀತಿಯನ್ನು ಅನುಷ್ಠಾನಗೊಳಿಸಲು ಪ್ರಯತ್ನ ನಡೆಸುತ್ತೇನೆ ಎಂದವರು ಭರವಸೆ ನೀಡಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here