Thursday 25th, April 2024
canara news

ಪಡೀಲ್‌ ಗಣೇಶ್‌ ಆಚಾರ್ಯ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Published On : 27 Jul 2016   |  Reported By : Canaranews Network


ಮಂಗಳೂರು: ಮಂಗಳೂರಿನ ಪಡೀಲ್‌ನಲ್ಲಿ ನಡೆದಿದ್ದ ಗಣೇಶ್‌ ಆಚಾರ್ಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಡೀಲ್‌ ಅಳಪೆಯ ಉಮಾಶಂಕರ ( 39 ) , ಕಣ್ಣೂರುನ ಶಶಿರಾಜ್‌ (30), ವೀರನಗರದ ನಿತಿನ್‌ ಕುಮಾರ್‌ ( 32) ಹಾಗೂ ಪಡೀಲ್‌ನ ಆಲ್ವಿನ್‌ ಸಿಕ್ವೇರಾ ( 25) ಬಂಧಿತ ಆರೋಪಿಗಳು.ಜು. 20ರಂದು ಪಡೀಲ್‌ನ ಬಾವಿಯೊಂದರಲ್ಲಿ ಗಣೇಶ ಆಚಾರ್ಯ ಅವರ ಮೃತದೇಹ ಪತ್ತೆಯಾಗಿತ್ತು. ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು ಮೃತರ ಸಹೋದರ ಪೊಲೀಸರಿಗೆ ನೀಡಿದ ದೂರಿನಲ್ಲಿ ಈ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು.

ಈ ಹಿನ್ನಲೆಯಲ್ಲಿ ಪೊಲೀಸ್‌ ಆಯುಕ್ತರು ಈ ಬಗ್ಗೆ ತನಿಖೆ ನಡೆಸಲು ಸಿಸಿಬಿ ಸೇರಿದಂತೆ ತಂಡಗಳನ್ನು ರಚಿಸಿದ್ದರು. ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು ಕೊಲೆ ಮಾಡಿದ ಆರೋಪಿಗಳ ಬಗ್ಗ ಖಚಿತ ಮಾಹಿತಿಯನ್ನು ಸಂಗ್ರಹಿಸಿ ಜು.23 ರಂದು ಸಂಜೆ 4.30 ಗಂಟೆಗೆ ನಾಲ್ವರು ಆರೋಪಿಗಳನ್ನು ಕಂಕನಾಡಿ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಗಣೇಶ್‌ ಆಚಾರ್ಯರ ಮೇಲೆ ಮಾರಣಾಂತಿಕ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಗಣೇಶ್‌ ಆಚಾರ್ಯ ಆರೋಪಿ ಉಮಾಶಂಕರ್‌ನ ತಂದೆಗೆ ಅವ್ಯಾಚ್ಯವಾಗಿ ನಿಂದಿಸುತ್ತಿದ್ದು ಇದಕ್ಕೆ ಪ್ರತಿಕಾರವಾಗಿ ಈ ಕೊಲೆಕೃತ್ಯ ಎಸಗಿರುವುದಾಗಿ ಆರೋಪಿಗಳು ವಿಚಾರಣೆ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿದೆ.


ಪೊಲೀಸ್‌ ಆಯುಕ್ತರ ಆದೇಶದಂತೆ ಕಾನೂನು ಹಾಗೂ ಸುವ್ಯವಸ್ಥೆ ಡಿಸಿಪಿ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್‌ಪೆಕ್ಟರ್‌ ಸುನೀಲ್‌ ವೈ.ನಾಯ್ಕ ಮತ್ತು ಪಿಎಸ್‌ಐ ಶ್ಯಾಮಸುಂದರ್‌ ಎಚ್‌.ಎಂ. ಹಾಗೂ ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here