Friday 19th, April 2024
canara news

ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಸ್ಥಗಿತಕ್ಕೆ ಕಾರ್ಣಿಕ್‌ ಆಗ್ರಹ

Published On : 28 Jul 2016   |  Reported By : Canaranews Network


ಮಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವ ವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿಸಿದ್ದು,

ಇದರಿಂದ ಶಿಕ್ಷಕರಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಈ ಹಿಂದೆ ನಿರ್ಣಯಿಸಿದಂತೆ ಮಲೆನಾಡಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳನ್ನು ಗುರುತಿಸುವಾಗ ಮಲೆನಾಡು ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳಿಗೆ ಅನ್ವಯಿಸುವಂತೆ ಗುರುತಿಸುವುದಾಗಿ ನಿರ್ಣಯಿಸಿದ್ದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತಾಲೂಕುಗಳಿಗೆ ಮಲೆನಾಡಿನ ಅನುಪಾತ ಅನ್ವಯಿಸದಿರುವುದರಿಂದ ಈ ಜಿಲ್ಲೆಗಳ ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ.

ಇದಲ್ಲದೆ ಮಾಜಿ ಸೈನಿಕರ ಪತ್ನಿಯರಿಗೆ ಇರುವ ಅವಕಾಶಗಳನ್ನು ನಿರಾಕರಿಸುವುದು ಸಹ ಬೆಳ್ತಂಗಡಿ ತಾಲೂಕಿನಿಂದ ವರದಿಯಾಗಿರುತ್ತದೆ.ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸುವವರೆಗೆ ಈ ಪ್ರಕ್ರಿಯೆಯನ್ನು ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳ ವಿದ್ಯಾಂಗ ಉಪನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here