Tuesday 23rd, April 2024
canara news

ಮನಪಾದಿಂದ ಅನೇಕ ಅಭಿವೃದ್ಧಿ ಕಾರ್ಯ: ಸಚಿವ ರೈ

Published On : 31 Jul 2016   |  Reported By : Canaranews Network


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ನಗರದ ಅಭಿವೃದ್ಧಿಯ ನಿಟ್ಟಿನಲ್ಲಿ ಆನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನದ ಬದ್ಧತೆಯನ್ನು ಮೆರೆದಿದೆ ಎಂದು ರಾಜ್ಯ ಅರಣ್ಯ, ಪರಿಸರ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರುಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳೂರಿನಲ್ಲಿ ಆದಿತ್ಯವಾರ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಬಳಿಕ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಪಾಲಿಕೆ ವತಿಯಿಂದ ಪುರಭವನದಲ್ಲಿ ಭೋಜನಗೃಹ, ಅಳಕೆ ಮತ್ತು ಕಾವೂರಿನಲ್ಲಿ ಮಾರುಕಟ್ಟೆ ನಿರ್ಮಾಣ ಹಾಗೂ ಕಾವೂರು ಜಂಕ್ಷನ್‌ ಅಭಿವೃದ್ಧಿ ಮುಂತಾದ ಕಾಮಗಾರಿಗಳಿಗೆ ಇಂದು ಶಿಲಾನ್ಯಾಸ ಮಾಡಲಾಗಿದೆ.

ರಾತ್ರಿ ವಸತಿರಹಿತ ನಾಗರಿಕರಿಗೆ ಬಂದರಿನಲ್ಲಿ ನಿರ್ಮಿಸುತ್ತಿರುವ ವಸತಿ ವ್ಯವಸ್ಥೆಯ ನೆಲಅಂತಸನ್ನು ಉದ್ಘಾಟಿಸಲಾಗಿದೆ. ಮಹಾನಗರದ ಸಮಗ್ರ ಅಭಿವೃದ್ಧಿಗೆ ಪಾಲಿಕೆ ಹಲವಾರು ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದೆ ಎಂದು ಅವರು ಹೇಳಿದ್ದಾರೆ.ಈ ಸಂದರ್ಭ ಶಾಸಕ ಜೆ.ಆರ್. ಲೋಬೋ, ಮೇಯರ್ ಹರಿನಾಥ್ ಮೊದಲಾದವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here