Saturday 20th, April 2024
canara news

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿ ವಜಾ

Published On : 09 Aug 2016   |  Reported By : Canaranews Network


ಮಂಗಳೂರು: 2012ರಲ್ಲಿ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾಳನ್ನು ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿ ಸಂತೋಷ್ ರಾವ್ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿದೆ.ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಡ್ಜ್ ವಿನೀತಾ ಪಿ. ಶೆಟ್ಟಿ ಅವರು, ಆರೋಪಿಗೆ ಜಾಮೀನಿ ನೀಡಿದರೆ ತನಿಖೆಗೆ ಹಿನ್ನಡೆಯಾಗುವ ಸಾಧ್ಯತೆ ಇದ್ದು, ಆರೋಪಿ ತನಿಖೆಗೆ ಅಡ್ಡಿ ಪಡಿಸಬಹುದು.

ಅಲ್ಲದೆ ಜಾಮೀನು ನೀಡಿದರೆ ಸಮಾಜದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.ವಿದ್ಯಾರ್ಥಿನಿ ಅತ್ಯಾಚಾರದ ನಂತರ ಆಕೆಯ ಹಲವು ವಸ್ತುಗಳನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಎಲ್ಲರಿಗೂ ತಿಳಿದಿದೆ. ಹೀಗಾಗಿ ವೈದ್ಯರ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಅಕ್ಟೋಬರ್ 9, 2012 ರಂದು ಕಾಲೇಜಿಗೆ ಹೋಗಿದ್ದ ಸೌಜನ್ಯಾ ವಾಪಸ್ ಬಂದಿರಲಿಲ್ಲ. ಈ ಸಂಬಂಧ ತಂದೆ ಚಂದ್ರಪ್ಪ ಗೌಡ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆ ಬಳಿಕ ಸಾರ್ವಜನಿಕರ ತೀವ್ರ ಪ್ರತಿಭಟನೆಯ ನಂತರ ಸೌಜನ್ಯಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here