Friday 26th, April 2024
canara news

ಬಹುತೇಕ ಬೃಹತ್‌ ಸರಕಾರಿ ಕಟ್ಟಡಗಳಿಗೆ ಸೌರಶಕ್ತಿ ಮೇಲ್ಛಾವಣಿ

Published On : 13 Aug 2016   |  Reported By : Canaranews Network


ಮಂಗಳೂರು: ಕೇಂದ್ರ ಸರಕಾರದ ವಿದ್ಯುತ್‌ ಸೌಲಭ್ಯಗಳಲ್ಲಿ ಒಂದಾದ ಐಪಿಡಿಎಸ್‌ (ಇಂಟಗ್ರೇಟೆಡ್‌ ಪವರ್‌ ಡೆವಲಪ್‌ಮೆಂಟ್‌ ಸ್ಕೀಂ) ಯೋಜನೆಯಡಿ ಜಿಲ್ಲೆಯ ಸರಕಾರಿ ಕಟ್ಟಡಗಳಲ್ಲಿ ಸೌರಶಕ್ತಿ ವಿದ್ಯುತ್‌ ಮೇಲ್ಛಾವಣಿ (ಸೋಲಾರ್‌ ಎನರ್ಜಿ ಟಾಪ್‌ ಫೆಸಿಲಿಟಿ) ಅಳವಡಿಸಲು ಸಿದ್ಧತೆ ನಡೆದಿದೆ. ಈ ಯೋಜನೆಯ ಮೂಲಕ ದ.ಕ. ಜಿಲ್ಲೆಯಲ್ಲಿ 24x7 ವಿದ್ಯುತ್‌ ಸರಬರಾಜು ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶ. ಒಟ್ಟು 1,000 ಕಿಲೋ ವ್ಯಾಟ್‌ ಸಾಮರ್ಥ್ಯದ ಸೌರಶಕ್ತಿ ವಿದ್ಯುತ್‌ ಮೇಲ್ಛಾವಣಿ ಅಳವಡಿಸಲು ಈಗಾಗಲೇ ಮಂಜೂರಾತಿ ದೊರೆತಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ಸರಕಾರಿ ಕಟ್ಟಡಗಳನ್ನು ಆಯ್ಕೆ ಮಾಡುವಾಗ ಸಣ್ಣ ಕಟ್ಟಡಗಳ ಬದಲು ಹೆಚ್ಚು ಸ್ಥಳಾವಕಾಶ ಇರುವ ಹಾಗೂ ಹೆಚ್ಚು ವಿದ್ಯುತ್ತಿನ ಬಳಕೆ ಇರುವ ಕಟ್ಟಡಗಳನ್ನು ಆಯ್ಕೆ ಮಾಡಲಾಗುತ್ತಿದೆ.

550 ಕಿ.ವ್ಯಾ. ವಿದ್ಯುತ್‌ ಉತ್ಪಾದನೆ ಗುರಿ ನಗರದ ವಿವಿಧ ಸರಕಾರಿ ಕಟ್ಟಡಗಳಿಗೆ ಸೋಲಾರ್‌ ಅಳವಡಿಕೆಯಿಂದ ಒಟ್ಟು 550 ಕಿಲೋ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ ಹೊಂದಲಾಗಿದೆ. ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಸುಳ್ಯ ವಿಧಾನಸೌಧದಲ್ಲಿ ತಲಾ 50 ಕಿಲೋ ವ್ಯಾಟ್‌ ಸಾಮರ್ಥ್ಯದ ಒಟ್ಟು 250 ಕಿ.ವ್ಯಾಟ್‌ನ ಗುರಿ ಹೊಂದಲಾಗಿದೆ. ಪುತ್ತೂರು ತಾಲೂಕು ಆಸ್ಪತ್ರೆ, ಬನ್ನೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ತಾ.ಪಂ., ಬೆಳ್ತಂಗಡಿ ತಾಲೂಕು ಆಸ್ಪತ್ರೆ, ತಾಲೂಕು ಪಂಚಾಯತ್‌, ಬಂಟ್ವಾಳ ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ತಲಾ 25 ಕಿಲೋ ವ್ಯಾಟ್‌ನಂತೆ ಒಟ್ಟು 200 ಕಿಲೋವ್ಯಾಟ್‌ ಉತ್ಪಾದಿಸಲು ನಿರ್ಧರಿಸಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here