Friday 26th, April 2024
canara news

ಸ್ವಾತಂತ್ರೊತ್ಸವ : ಎಲ್ಲೆಡೆ ಬಿಗಿ ಭದ್ರತೆ

Published On : 13 Aug 2016   |  Reported By : Canaranews Network


ಮಂಗಳೂರು/ಉಡುಪಿ: ದೇಶಾದ್ಯಂತ ಆ. 15ರಂದು ಸ್ವಾತಂತ್ರೊತ್ಸವ ಆಚರಿಸುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಇತ್ತೀಚಿಗೆ ಮೈಸೂರು ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟವಾಗಿರು ವುದರಿಂದ ಹಾಗೂ ಇಂತಹ ಸಂದರ್ಭ ಸಮಾಜಘಾತುಕ ಶಕ್ತಿಗಳು ಅಹಿತಕರ ಘಟನೆಗಳಿಗೆ ಯತ್ನಿಸಿ ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು, ವಸ್ತು ಗಳು, ಅಪರಿಚಿತರು ಕಂಡು ಬಂದಲ್ಲಿ ತತ್ಕ್ಷಣ ಹತ್ತಿರದ ಪೊಲೀಸ್ ಠಾಣೆ, ವೃತ್ತ ಕಚೇರಿ, ಉಪವಿಭಾಗ ಕಚೇರಿ, ಜಿಲ್ಲಾ ಪೊಲೀಸ್ ಕಚೇರಿಯ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಕೋರಿದೆ.ಜಿಲ್ಲಾದ್ಯಂತ ಆಯಕಟ್ಟಿನ ಸ್ಥಳಗಳಲ್ಲಿ ನಿಗಾ ವಹಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತಿದೆ.

ಯಾವುದೇ ರೀತಿಯಲ್ಲಿ ಪ್ಲಾಸ್ಟಿಕ್ ಧ್ವಜ ಬಳಸದಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಸಾರ್ವಜನಿಕರು ತಮ್ಮ ಬಾಡಿಗೆ ಮನೆಗಳಲ್ಲಿ ಮತ್ತು ಲಾಡ್ಜ್ ಮಾಲಕರು ತಮ್ಮ ಲಾಡ್ಜ್, ಹೊಟೇಲ್, ಚೌಟರಿಗಳಲ್ಲಿ ಅಪರಿ ಚಿತರು ಅನುಮಾನಾಸ್ಪದ ವ್ಯಕ್ತಿಗಳು ತಂಗದಂತೆ ಎಚ್ಚರ ವಹಿಸುವುದು ಹಾಗೂ ತಂಗಿದ ವ್ಯಕ್ತಿಗಳ ಭಾವಚಿತ್ರ ಮತ್ತು ಮೊಬೈಲ್ ಸಂಖ್ಯೆ ಪರಿಶೀಲಿಸಿ ಪಡೆದುಕೊಳ್ಳಬೇಕು. ಸಂಶಯವಿದ್ದಲ್ಲಿ ಮಾಹಿತಿ ಒದಗಿಸುವಂತೆ ಕೋರಿದೆ.

ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಅಂತಹವರ ಹೆಸರನ್ನು ಗೌಪ್ಯವಾಗಿಡ ಲಾಗುವುದು.

ಸಾರ್ವಜನಿಕರು ಪೊಲೀಸ್ ತಪಾ ಸಣೆ ವೇಳೆ ಹಾಗೂ ಪೊಲೀಸ್ ಕರ್ತವ್ಯಕ್ಕೆ ಪೊಲೀಸರೊಂದಿಗೆ ಸಹಕರಿಸುವಂತೆ ಹಾಗೂ ಮಾಹಿತಿಯಿದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ 0824-2220500, 0824-2440284, 9480805300 (ದ.ಕ.), 0820-2526444, 94808 05401 (ಉಡುಪಿ) ಸಂಪರ್ಕಿ ಸುವಂತೆ ಎಸ್ಪಿ ಪ್ರಕಟನೆ ತಿಳಿಸಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here