Thursday 28th, March 2024
canara news

ಅಭಿವೃದ್ಧಿಯಲ್ಲಿ ಶಿಕ್ಷಣ ಪಾತ್ರ ಮಹತ್ತರ: ಸಚಿವ ಖಾದರ್‌

Published On : 16 Aug 2016   |  Reported By : Canaranews Network

ಮಂಗಳೂರು: ಶಿಕ್ಷಣದಿಂದ ಅರ್ಥಿಕವಾಗಿ ಸಶಕ್ತರಾಗಲು ಸಾಧ್ಯವಾಗುತ್ತದೆ. ಆದುರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಆ ನಿಟ್ಟಿನಲ್ಲಿ ಶ್ರಮಿಸುವುದು ಅವಶ್ಯ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು.ದುಬೈ ಬ್ಯಾರೀಸ್‌ ಕಲ್ಚರಲ್‌ ಫೋರಂ (ಬಿಸಿಎಫ್‌) ವತಿಯಿಂದ ನಗರದ ಸೈಂಟ್‌ ಅಲೋಶಿಯಸ್‌ ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ರವಿವಾರ ಆಯೋಜಿಸಿದ್ದ ವಿದ್ಯಾರ್ಥಿವೇತನ,

ಗಾಲಿಕುರ್ಚಿ, ಹೊಲಿಗೆ ಯಂತ್ರ ಮುಂತಾದ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.ಆರ್ಥಿಕವಾಗಿ ಅಶಕ್ತರಾದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಿದಾಗ ಅವರು ಜೀವನದಲ್ಲಿ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ದುಬೈ ಬ್ಯಾರೀಸ್‌ ಕಲ್ಚರಲ್‌ ಫೋರಂ ಈ ಕಾರ್ಯವನ್ನು ಹಲವಾರು ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಎಂದವರು ಶ್ಲಾಘಿಸಿದರು.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here