Saturday 20th, April 2024
canara news

ಪೂಜಾರಿ ಹೇಳಿಕೆ ನೋವು ತಂದಿದೆ : ಸಚಿವ ಖಾದರ್‌

Published On : 20 Aug 2016   |  Reported By : Canaranews Network


ಮಂಗಳೂರು: ಮಹಾದಾಯಿ ಪ್ರತಿಭಟನೆ ಕುರಿತಂತೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಶಾಪ ತಟ್ಟಲಿದೆ ಎಂಬ ಪೂಜಾರಿಯವರ ಹೇಳಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜನಾರ್ದನ ಪೂಜಾರಿ ನನ್ನ ನಾಯಕರು.

ನನ್ನ ರಾಜಕೀಯ ಭವಿಷ್ಯ ರೂಪಿಸಿದವರು. ಅವರ ಮೇಲೆ ಅಪಾರ ಗೌರವ ಇದೆ. ಆದರೆ ಮಹಾದಾಯಿ ವಿಚಾರದಲ್ಲಿ ಮುಖ್ಯಮಂತ್ರಿಯವರ ಮೇಲೆ ಅವರು ಮಾಡಿರುವ ಟೀಕೆ ಸರಿಯಲ್ಲ. ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರು ಪೊಲೀಸರ ಕ್ರಮಕ್ಕೆ ರೈತರ ಕ್ಷಮೆ ಯಾಚಿಸಿದ್ದರು. ದೌರ್ಜನ್ಯ ನಡೆಸಿದ ಪೊಲೀಸ್‌ ಅಧಿಕಾರಿ ಹಾಗೂ ಸಿಬಂದಿಯನ್ನು ಅಮಾನತು ಮಾಡಲಾಗಿದೆ ಎಂದರು




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here