Saturday 20th, April 2024
canara news

ಕೇಂದ್ರ ಸಚಿವರಿಂದ 101.13 ಕೋಟಿ ರೂ. ಅನುದಾನ ಬಿಡುಗಡೆ

Published On : 23 Aug 2016   |  Reported By : Canaranews Network


ಮಂಗಳೂರು: ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಅಭಿವೃದ್ಧಿಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಮನವಿಗೆ ಸ್ಪಂದಿಸಿದ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಒಟ್ಟು 101.13 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ 4ರಡಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಪೈಕಿ 683 ಕಿ.ಮೀ.ಯಿಂದ 693 ಕಿ.ಮೀ.ವರೆಗೆ 28.45 ಕೋಟಿ ರೂ., 693 ಕಿ.ಮೀ.ಯಿಂದ 706 ಕಿ.ಮೀ.ವರೆಗೆ 39.19 ಕೋಟಿ ರೂ. ಮತ್ತು ರಾಷ್ಟ್ರೀಯ ಹೆದ್ದಾರಿಯ ಅಡ್ಡ ಚರಂಡಿಗಳ ಪುನರ್‌ ನಿರ್ಮಾಣಕ್ಕೆ 590 ಕಿ.ಮೀ.ಯಿಂದ 610 ಕಿ.ಮೀ.ವರೆಗೆ 23.81 ಕೋಟಿ ರೂ. ಹಾಗೂ 630 ಕಿ.ಮೀ.ಯಿಂದ 640 ಕಿ.ಮೀ.ವರೆಗೆ 9.71 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here