Thursday 18th, April 2024
canara news

ಕಲ್ಕೂರ ಪ್ರತಿಷ್ಠಾನ: ರಾಷ್ಟ್ರ ಮಟ್ಟದ ಶ್ರೀಕೃಷ್ಣ ವೇಷ ಸ್ಪರ್ಧೆ

Published On : 26 Aug 2016   |  Reported By : Canaranews Network


ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆ ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆಯ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಆಯೋಜಿಸುತ್ತಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ "ಶ್ರೀ ಕೃಷ್ಣ ವೇಷ ಸ್ಪರ್ಧೆ' ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪ್ರಾಂಗಣದಲ್ಲಿ ಬುಧವಾರ ನಡೆಯಿತು. ಬೆಳಗ್ಗಿನಿಂದ ಸಂಜೆ ವರೆಗೆ ಒಟ್ಟು 8 ವೇದಿಕೆಗಳಲ್ಲಿ 27 ವಿಭಾಗಗಳ ಸ್ಪರ್ಧೆ ಜರಗಿದವು.ರಾಷ್ಟ್ರ ಮಟ್ಟದ ಮಕ್ಕಳ ಉತ್ಸವವನ್ನು ಎ.ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಎ.ಜೆ. ಶೆಟ್ಟಿ ಉದ್ಘಾಟಿಸಿ, ಶುಭ ಕೋರಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಧಿಸ್ಥಾನದ ವೇ| ಮೂ| ಲಕ್ಷ್ಮಿನಾರಾಯಣ ಅಸ್ರಣ್ಣ ಆಶೀರ್ವಚನ ನೀಡಿದರು.

ಕದ್ರಿ ದೇವಸ್ಥಾನ ಅರ್ಚಕರಾದ ಪ್ರಭಾಕರ ಅಡಿಗ, ಲಕ್ಷ್ಮಿನಾರಾಯಣ ಅಡಿಗ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮೊದಲಾದವರು ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here