Thursday 18th, April 2024
canara news

ಎಪಿಎಲ್ ಕಾರ್ಡ್ಗೆ ಆನ್ಲೈನ್ ಅರ್ಜಿ: ಸಚಿವ ಖಾದರ್

Published On : 28 Aug 2016   |  Reported By : Canaranews Network

ಮಂಗಳೂರು: ಮುಂದಿನ ತಿಂಗಳಿನಿಂದ ಹೊಸದಾಗಿ ಎಪಿಎಲ್ ಕಾರ್ಡ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿಗೆ ಬರಲಿದ್ದು, ಸಾರ್ವಜನಿಕರು ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ತತ್ಕ್ಷಣ ತಾತ್ಕಾಲಿಕ ಪಡಿತರ ಚೀಟಿ ದೊರೆಯಲಿದ್ದು, ತಿಂಗಳ ಒಳಧಿಗಡೆ ಕಾರ್ಡ್ ಮನೆಗೆ ಬರಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ತಿಳಿಸಿದರು.ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಮೇಯರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಪೊರೇಟರ್ಗಳ ಸಭೆಯಲ್ಲಿ ಅವರು ಮಾತನಾಡಿದರು.

ಇಲಾಖೆಯಲ್ಲಿ ಬೇರೆ ಬೇರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ. ಸದ್ಯ ಪಡಿತರ ವಿತರಣೆಗೆ ಕೂಪನ್ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದರ ವಿತರಣೆ ಜವಾಬ್ದಾರಿಯನ್ನು ಸ್ಥಳೀಯ ಕಾರ್ಪೊರೇಟರ್ಗಳು ವಹಿಸಿಕೊಳ್ಳಬೇಕು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here