Thursday 18th, April 2024
canara news

ಹಾಸ್ಯ ಕವಿ ಡುಂಡಿರಾಜ್‍ರಿಗೆ ಸಾರ್ವಜನಿಕ ಅಭಿನಂದನೆ

Published On : 31 Aug 2016   |  Reported By : Rons Bantwal


ಕಾರ್ಪೊರೇಶನ್ ಬ್ಯಾಂಕಿನ ಉನ್ನತ ಹುದ್ದೆಯಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿ ಬೆಂಗಳೂರಿನಲ್ಲಿ ನೆಲೆಯಾಗಲಿರುವ ಕನ್ನಡ ಸಾರಸ್ವತ ಲೋಕದ ಶ್ರೇಷ್ಠ ಹಾಸ್ಯ ಕವಿ, ಆಶು ಕವಿ, ಅಂಕಣಕಾರ ಎಚ್. ಡುಂಡಿರಾಜ್, ಅವರಿಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಅಭಿನಂದನಾ ಕಾರ್ಯಕ್ರಮವನ್ನು ದಿನಾಂಕ 1-9-2016 ಗುರುವಾರ ಸಂಜೆ 5.30ಕ್ಕೆ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

 

ಬ್ಯಾಂಕಿನಿಂದ ನಿವೃತ್ತಿ, ಸಾಹಿತ್ಯದಲ್ಲಿ ಪ್ರವೃತ್ತಿ ಎನ್ನುವ ಶಿರೋನಾಮೆಯಲ್ಲಿ ಹಾಸ್ಯ ಕವಿ, ಆಶು ಕವಿ, ಅಂಕಣಕಾರರಾದ ಎಚ್. ಡುಂಡಿರಾಜ್‍ರಿಗೆ ಮಂಗಳೂರಿನ ಮಹಾಪೌರರಾದ ಶ್ರೀ ಹರಿನಾಥ್ ಅವರು ಗೌರವ ಪ್ರದಾನ ಮಾಡಲಿರುವರು. ಹಿರಿಯ ಸಾಹಿತಿಗಳು, ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಬಿ.ಎ. ವಿವೇಕ ರೈ ಅವರು ಅಭಿನಂದನ ಭಾಷಣ ಮಾಡಲಿರುವರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ, ಕಾರ್ಪೊರೇಶನ್ ಬ್ಯಾಂಕ್ ಸಿರಿಗಂಧ ಕನ್ನಡ ಬಳಗದ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾಥ ರೆಡ್ಡಿ, ಶಾರದಾ ವಿದ್ಯಾಲಯದ ಅಧ್ಯಕ್ಷರಾದ ಪ್ರೊ. ಎಂ.ಬಿ. ಪುರಾಣಿಕ್, ಹಿರಿಯ ಸಾಹಿತಿಗಳಾದ ಡಾ. ಸತ್ಯನಾರಾಯಣ ಮಲ್ಲಿಪಟ್ಟಣ, ಹಾಸ್ಯ ಸಾಹಿತಿಗಳಾದ ಶ್ರೀಮತಿ ಭುವನೇಶ್ವರಿ ಹೆಗಡೆ, ನಾ. ದಾ. ಶೆಟ್ಟಿ, ಕಾಸರಗೋಡು ಅಶೋಕ್ ಕುಮಾರ್, ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರು, ಮತ್ತು ಶ್ರೀಮತಿ ವಿಜಯಲಕ್ಷ್ಮೀ ಬಿ. ಶೆಟ್ಟಿ ಮುಂತಾದವರು ಉಪಸ್ಥಿತರಿರುವರು.

ಕಾರ್ಪೊರೇಶನ್ ಬ್ಯಾಂಕ್ ಸಿರಿಗಂಧ ಬಳಗ ಹಾಗೂ ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳು, ದಕ್ಷಿಣ ಕನ್ನಡ ಜಿಲ್ಲಾ ಚುಟು ಸಾಹಿತ್ಯ ಪರಿಷತ್ತು ಕಾರ್ಯಕ್ರಮದಲ್ಲಿ ಸಹಯೋಗವನ್ನು ನೀಡಲಿವೆ. ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here