Friday 26th, April 2024
canara news

ಕಾರಾಗೃಹದ ಕೈದಿ ಹೃದಯಾಘಾತದಿಂದ ಸಾವು

Published On : 16 Sep 2016   |  Reported By : Canaranews Network


ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಕಾರ್ಕಳ ಹೊಸ್ಮಾರು ಈದು ಗ್ರಾಮ ಬಾಬು ಯಾನೆ ಮಬು (60) ಅವರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅನಾರೋಗ್ಯ ಹೊಂದಿದ್ದ ಅವರಿಗೆ ಹಲವು ಬಾರಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿತ್ತು. ಮಂಗಳವಾರವೂ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಕೂಡಲೇ ಸಿಬ್ಬಂದಿಗಳ ಭದ್ರತೆಯೊಂದಿಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಾರ್ಗದ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ.

ಬಾಬು ಅವರು ಮೂಡಬಿದಿರೆ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶದ ಮೇರೆಗೆ 2015ರ ಸೆ.1ರಿಂದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ದಾಖಲಿಸಲಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿ ಪಡೆಯುತ್ತಿದ್ದರು ಎನ್ನಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here