Friday 29th, March 2024
canara news

ವಿ.ವಿ. ಮೊಬೈಲ್‌ ಪ್ರಕರಣ: ಜಾಮೀನು ರದ್ದತಿ ಕೋರಿ ಮೇಲ್ಮನವಿಗೆ ಸೂಚನೆ

Published On : 20 Sep 2016   |  Reported By : Canaranews Network   |  Pic On: photo credit: The Hindu


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶೌಚಾಲಯದಲ್ಲಿ ಮೊಬೈಲ್‌ ಇರಿಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಲು ವಿ.ವಿ. ಕುಲಪತಿ ಅವರಿಗೆ ಸೂಚನೆ ನೀಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಸೋಮವಾರ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ 37ನೇ ಸಂಸ್ಥಾಪನ ದಿನಾಚರಣೆ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಯಾರು, ಆತನ ಹಿನ್ನೆಲೆ ಏನು ಎಂಬುದು ಎಲ್ಲರಿಗೂ ತಿಳಿದಿದೆ. ಆತನನ್ನು ತರಗತಿಯಿಂದ ಅಮಾನತು ಮಾಡಲಾಗಿದೆ. ಕೆಲವು ಕೋಮುವಾದಿ ಶಕ್ತಿಗಳು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಇದನ್ನು ಖಂಡಿಸುತ್ತೇನೆ.

ಮತೀಯವಾದದ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಕೃತ್ಯಗಳನ್ನು ನಡೆಸಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ಬೆಳ್ಳಾರೆಯ ಕಾಲೇಜೊಂದರಲ್ಲಿ ಉದ್ಬವಿಸಿರುವ ವಿವಾದದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಸರಿ ಶಾಲು ಧರಿಸುವವರು ಯಾರೇ ಇರಲಿ. ತರಗತಿಯೊಳಗೆ ಕೋಮುವಾದ ಬಿತ್ತುವ ಕೆಲಸ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here