Saturday 20th, April 2024
canara news

ಪೇಜಾವರ ಮಠ: ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮ ಸಮಾಪನ

Published On : 25 Sep 2016   |  Reported By : Rons Bantwal


ಮುಂಬಯಿ, ಸೆ.25: ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಪೇಜಾವರ ಮಠದ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಸಂಸ್ಥೆಯು ಸಾಂತಕ್ರೂಜ್ ಪೂರ್ವದ ಪೇಜಾವರ ಮಠದ ಮುಂಬಯಿ ಶಾಖೆಯಲ್ಲಿ ಆಯೋಜಿಸಿದ್ದ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮ ಇಂದಿಲ್ಲಿ ಶನಿವಾರ ಸಂಜೆ ಸಮಾಪ್ತಿ ಕಂಡಿತು.

ಪೇಜಾವರಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರ ಆಶೀರ್ವಾದ ಮತ್ತು ಮಾರ್ಗದರ್ಶನ ಹಾಗೂ ಇಂಟರ್‍ನ್ಯಾಶನಲ್ ಇನ್‍ಸ್ಟಿಟ್ಯೂಟ್ ಟ್ರೇನಿಂಗ್ ಸೆಂಟರ್ (ಐಐಟಿಸಿ) ಮುಂಬಯಿ ಸಂಸ್ಥೆಯ ಪ್ರಾಯೋಜಕ ತ್ವದಲ್ಲಿ ಆಯೋಜಿಸಲ್ಪಟ್ಟ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮಕ್ಕೆ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಮುಂಬಯಿ ಅಧ್ಯಕ್ಷ ಡಾ| ಎ.ಎಸ್ ರಾವ್ ಚಾಲನೆಯನ್ನೀಡಿದ್ದು, ಶ್ರೀ ಕೃಷ್ಣ ಪ್ರತಿಷ್ಠಾನದ ಸಂಸ್ಥಾಪಕ ಶ್ರೀ ಕೈರಬೆಟ್ಟು ವಿಶ್ವನಾಥ ಭಟ್ ಶುಭಾಶಂಸನೆಗೈದಿದ್ದರು. ಪೇಜಾವರ ಮಠದ ಪ್ರಬಂದಕ ವಿದ್ವಾನ್ ರಾಮದಾಸ ಉಪಾಧ್ಯಾಯ ಭಾಗವತ ಪ್ರವಚನ ಕಾರ್ಯಕ್ರಮ ನೇರವೇರಿಸಿದ್ದು ಶ್ರೀನಿವಾಸ ಭಟ್ ಪರೇಲ್ ಸಹಯೋಗ ನೀಡಿದರು.

ಇಂದು ಸಂಜೆ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮ ಸಮಾಪ್ತಿಗೊಂಡಿದ್ದು ಈ ಸಂದರ್ಭದಲ್ಲಿ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಡಾ| ಎ.ಎಸ್ ರಾವ್, ಅವಿನಾಶ್ ಶಾಸ್ತ್ರಿ, ಟಿ.ಬಿ ಹೊನ್ನೂರು, ಡಾ| ಎಂ.ಎಸ್ ಆಳ್ವ, ಆರ್.ಎಲ್ ಭಟ್, ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ವಿಶ್ವಸ್ಥರು, ಪದಾಧಿಕಾರಿಗಳು, ಐಐಟಿಸಿ ನಿರ್ದೇಶಕ ವಿಕ್ರಾಂತ್ ಉರ್ವಾಲ್, ನಿರಂಜನ್ ಗೋಗ್ಟೆÉ, ಶ್ರೀಹರಿ ಭಟ್, ಪುರೋಹಿತರು ಸೇರಿದಂತೆ ಭಕ್ತರನೇಕರು ಉಪಸ್ಥಿತರಿದ್ದು, ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ ಸ್ವಾಗತಿಸಿ ಧನ್ಯವದಿಸಿದÀರು.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here