Thursday 25th, April 2024
canara news

ದ.ಕ.ಎಸ್ಪಿ ಕಚೇರಿಗೆ ಸಂಚಾರ ನಿಯಮ ಉಲ್ಲಂಘನೆಯ ಮಾಹಿತಿ

Published On : 04 Oct 2016   |  Reported By : Canaranews Network


ಮಂಗಳೂರು: ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳು ಇನ್ನು ಮುಂದೆ ದಾಖಲೆ ಸಮೇತ ದ.ಕ. ಜಿಲ್ಲಾ ಎಸ್ಪಿ ಕಚೇರಿಯ ವ್ಯಾಟ್ಸ್ಆಪ್ ಹಾಗೂ ಫೇಸ್ಬುಕ್ಗೆ ಅಪ್ಲೋಡ್ ಆಗಲಿವೆ.ಇಂತಹ ಸೌಲಭ್ಯವನ್ನು ದ.ಕ. ಜಿಲ್ಲೆಯ ಸಾರ್ವಜನಿಕರಿಗೆ ಪೊಲೀಸರು ಒದಗಿಸಿದ್ದಾರೆ. ಈ ಯೋಜನೆ ಅ.4ರಿಂದಲೇ ಜಾರಿಗೆ ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ರಾವ್ ಬೊರಸೆ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ನಮ್ಮ ಟ್ರಾಫಿಕ್ ಹೆಸರಿನ ವಾಟ್ಸ್ಆಪ್ 9480805300 ನಂಬರನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗಿದೆ. ವಾಹನಗಳನ್ನು ಸಂಚಾರಕ್ಕೆ ಅಡೆತಡೆಯಾಗುವಂತೆ ಅಥವಾ ಅಡ್ಡಾದಿಡ್ಡಿ ನಿಲ್ಲಿಸಿರುವುದು ಕಂಡುಬಂದರೆ ಆ ವಾಹನದ ಫೋಟೋ ಹಾಗೂ ಸ್ಥಳದ ವಿವರವನ್ನು ಸಾರ್ವಜನಿಕರು ಈ ನಂಬರಿಗೆ ಕಳುಹಿಸ ಬೇಕು. ಕಳುಹಿಸಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಹಾಗೂ ಕೈಗೊಂಡ ಕ್ರಮದ ಬಗ್ಗೆ ಅವರಿಗೆ ಮಾಹಿತಿ ನೀಡಲಾಗುತ್ತದೆ.ಈ ನಂಬರಿಗೆ ಕಳುಹಿಸಿದ ಮಾಹಿತಿಯನ್ನು ಪೊಲೀಸ್ ಕಂಟ್ರೋಲ್ ರೂಂನಲ್ಲಿ ಸ್ವೀಕರಿಸುತ್ತಾರೆ. ಅಲ್ಲಿಂದ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಲಾಗುತ್ತದೆ. ಆ ಠಾಣೆಯವರು ಆ ವಾಹನಕ್ಕೆ ದಂಡ ವಿಧಿಸಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿಯನ್ನು ನೀಡುತ್ತಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here