Friday 26th, April 2024
canara news

5 ವರ್ಷಗಳಿಂದ ಗಾಂಜಾ ಮಾರಟ ಮಾಡುತ್ತಿದ್ದ ಆರೋಪಿಯ ಬಂಧನ

Published On : 05 Oct 2016   |  Reported By : Canaranews Network


ಮಂಗಳೂರು: ಸುಮಾರು 5 ವರ್ಷಗಳಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಡ್ರಗ್ ಅಫೆಂಡರ್ ಎಂದು ಪರಿಗಣಿಸಿ ಅ.3ರಂದು ಮಂಗಳೂರು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ಪ್ರಥಮ ಬಾರಿಗೆ ಗಾಂಜಾ ಪ್ರಕರಣದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದ್ದು, ಆರೋಪಿ ಬಂದರು ಅನ್ಸಾರಿ ರಸ್ತೆ ಸಿ.ಪಿ.ಸಿ. ಕಂಪೌಂಡ್ ಬಳಿ ನಿವಾಸಿ ಟಿ.ಪಿ. ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಿಂಡೀ ರಹೀಂ (41)ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ. ಈತನ ವಿರುದ್ಧ ಬಂದರು ಪೊಲೀಸ್ ಠಾಣೆ, ಪಣಂಬೂರು ಪೊಲೀಸ್ ಠಾಣೆ ಹಾಗೂ ಬರ್ಕೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಎನ್ಡಿಪಿಎಸ್ ಕಾಯ್ದೆ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣಗಳ ಪೈಕಿ 5 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, 3 ಪ್ರಕರಣಗಳು ತನಿಖಾ ಹಂತದಲ್ಲಿದೆ.ಆರೋಪಿ ರಹೀಂ ಈ ಹಿಂದೆ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಪಡೆದು ಯಾವುದೇ ಕಾನೂನು ಕ್ರಮಕ್ಕೂ ಹೆದರದೇ ಗಾಂಜಾ ಮಾರಾಟ ಪ್ರವೃತ್ತಿಯನ್ನು ಮುಂದುವರಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಈತನನ್ನು ಡ್ರಗ್ ಅಫೆಂಡರ್ ಎಂದು ಪರಿಗಣಿಸಿ ಬಂಧನದ ಆದೇಶ ಹೊರಡಿಸಲು ಬಂದರು ಪೊಲೀಸ್ ಠಾಣಾ ನಿರೀಕ್ಷಕ ಶಾಂತಾರಾಮ್, ಎಸಿಪಿ ಕೇಂದ್ರ ಉಪವಿಭಾಗದ ಉದಯ ನಾಯಕ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು ಅವರ ವರದಿಯಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್ ಆರೋಪಿಯ ವಿರುದ್ಧ ಬಂಧನದ ಆಜ್ಞೆ ಹೊರಡಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here