Friday 26th, April 2024
canara news

ರಾಜ್ಯದ ವಿ.ವಿ.ಗಳಲ್ಲಿ ಕ್ರೀಡಾನೀತಿ ಅವಶ್ಯಕ : ಐವನ್ ಡಿ'ಸೋಜಾ

Published On : 06 Oct 2016   |  Reported By : Canaranews Network


ಮಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಕ್ರೀಡಾನೀತಿ ಜಾರಿಗೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ'ಸೋಜಾ ಹೇಳಿದರು.ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ವತಿಯಿಂದ ಬಿಎ, ಬಿಕಾಂ, ಎಂಎ, ವಿದೇಶಿ ಭಾಷೆಗಳಲ್ಲಿ ಡಿಪ್ಲೊಮಾ ಕೋರ್ಸ್ಗಳನ್ನು ಉದ್ಘಾಟಿಸಿ ಅವರು ಬುಧವಾರ ಮಾತ ನಾಡಿದರು.ಸೆಮಿಸ್ಟರ್ ಪದ್ಧತಿಯಿಂದಾಗಿ ಪಾಠಗಳನ್ನು ಪೂರ್ಣಗೊಳಿಸುವುದರ ನಡುವೆ ಕ್ರೀಡಾ ಚಟುವಟಿಕೆಗಳಿಗೆ ಸಮಯ ಸಾಲುತ್ತಿಲ್ಲ.

ಮಂಗಳೂರು ವಿವಿ ಕ್ರೀಡಾನೀತಿ ತರುವುದಕ್ಕೆ ಮುಂದಾಗಿದೆ. ಇದರಂತೆ ಇಡೀ ರಾಜ್ಯದ ವಿವಿಗಳಲ್ಲಿ ಕ್ರೀಡಾನೀತಿ ಜಾರಿಗೊಂಡರೆ ಪೂರಕವಾಗಿರುತ್ತದೆ. ಅದರೊಂದಿಗೆ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಪದ್ಧತಿಯನ್ನೂ ಜಾರಿಗೊಳಿಸಿದರೆ ಉತ್ತಮ. ಈ ನಿಟ್ಟಿನಲ್ಲಿ ಸಂಬಂಧ ಪಟ್ಟವರೊಂದಿಗೆ ಮಾತನಾಡುವುದಾಗಿ ಅವರು ಹೇಳಿದರು.

ಮಂಗಳೂರು ವಿವಿ ಕುಲಸಚಿವ ಪ್ರೊ| ಕೆ.ಎಂ. ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರೋಯ್ ಕ್ಯಾಸ್ತೆಲಿನೊ, ವಿವಿ ಕಾಲೇಜು ಪ್ರಾಂಶುಪಾಲ ಡಾ| ಉದಯಕುಮಾರ್ ಎಂ. ಎ., ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಜಯಪ್ರಕಾಶ್ ರಾವ್ ಮುಖ್ಯ ಅತಿಥಿಗಳಾಗಿದ್ದರು ಮೊದಲಾದವರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here