Thursday 25th, April 2024
canara news

ಕಟೀಲಿನಲ್ಲಿ ಲಲಿತಾ ಪಂಚಮಿ; 17,000 ಸೀರೆ ವಿತರಣೆ

Published On : 07 Oct 2016   |  Reported By : Canaranews Network

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಲಲಿತಾ ಪಂಚಮಿ ವಿಶೇಷ ಆಚರಣೆ ನಡೆಯಿತು.ಬೆಳಗ್ಗೆ ದೇಗುಲದಲ್ಲಿ ಮಹಾ ಚಂಡಿಕಾ ಹವನ ನಡೆಯಿತು. ಕನ್ನಿಕಾ ಪೂಜೆ, ಸುವಾಸಿನಿ ಪೂಜೆ, ರಾತ್ರಿ ರಂಗ ಪೂಜೆ ನಡೆಯಿತು.

ಮಧ್ಯಾಹ್ನ 17,000 ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ಸೀರೆಗಳನ್ನು ವಿತರಿಸಲಾಯಿತು. 35,000 ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.ದೇಗುಲದ ಮೊಕ್ತೇಸರಾದ ವಾಸುದೇವ ಅಸ್ರಣ್ಣ, ಡಾ| ರವೀಂದ್ರನಾಥ ಪೂಂಜಾ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಶ್ರೀ ಹರಿನಾರಾಯಣದಾಸ ಆಸ್ರಣ್ಣ, ಕುಮಾರ ಆಸ್ರಣ್ಣ, ತಂತ್ರಿಗಳಾದ ವೇದವ್ಯಾಸ ತಂತ್ರಿ, ಪ್ರವೀಣ್ದಾಸ್ ಭಂಡಾರಿ, ಸುಧೀರ್ ಶೆಟ್ಟಿ, ಪ್ರಬಂಧಕ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here