Thursday 25th, April 2024
canara news

ಜಿಲ್ಲೆಯ ನಿರ್ಲಕ್ಷಿಸಿದಲ್ಲಿ ಪ್ರತ್ಯೇಕ ತುಳುರಾಜ್ಯದ ಬೇಡಿಕೆ : ಕೇಮಾರು

Published On : 08 Oct 2016   |  Reported By : Canaranews Network


ಮಂಗಳೂರು: ಪ್ರಕೃತಿಯೊಂದಿಗೆ ಚೆಲ್ಲಾಟವಾಡಿದಲ್ಲಿ ಪ್ರಕೃತಿಯೇ ತಿರುಗಿಬೀಳುತ್ತದೆ. ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಮುನ್ನ ಸರಕಾರ ಎಚ್ಚೆತ್ತುಕೊಂಡು ದೃಢ ನಿರ್ಧಾರ ಕೈಗೊಳ್ಳಬೇಕು. ಜಿಲ್ಲೆಯ ಜನರನ್ನು ನಿರ್ಲಕ್ಷಿಸುವುದು ಮುಂದುವರಿಸಿದಲ್ಲಿ ಪ್ರತ್ಯೇಕ ತುಳು ರಾಜ್ಯ ರಚನೆಗೆ ಬೇಡಿಕೆಯಿಡ ಬೇಕಾದೀತು ಎಂದು ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಎಚ್ಚರಿಸಿದರು.

ಎತ್ತಿನಹೊಳೆ ಯೋಜನೆ ನಿಲ್ಲಿಸುವ ಬಗ್ಗೆ ಜಿಲ್ಲೆಯ ಜನತೆಯ ಕೂಗಿಗೆ ಸ್ಪಂದಿಸದ ಮತ್ತು ತುಳುನಾಡಿನ ಬಗ್ಗೆ ಸರಕಾರದ ಮಲತಾಯಿ ಧೋರಣೆ ಖಂಡಿಸಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಮಂಗಳವಾರ ಬೆಸೆಂಟ್ ಸರ್ಕಲ್ ಬಳಿ ಗುರುವಾರ ಆಯೋಜಿಸಲಾಗಿದ್ದ ಬೃಹತ್ ರಾಸ್ತಾರೋಕೋ ಚಳವಳಿಯಲ್ಲಿ ಅವರು ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು.ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟಕ್ಕೆ ವಿದ್ಯಾರ್ಥಿಗಳೂ ಕೈ ಜೋಡಿಸಿರು ವುದು ಆಶಾದಾಯಕ ಬೆಳವಣಿಗೆ. ಈ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸೆಗೆ ತಿರುಗುವ ಮುನ್ನ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here